ವರದಿಗಾರರು :
ಸಿಂಚನ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
29-10-2025
ಬೆಂಗಳೂರು :ಮಾಡೆಲ್ ಮೇಲೆ ದೌರ್ಜನ್ಯ ಆರೋಪ -ಡೆಲಿವರಿ ಬಾಯ್ ಅರೆಸ್ಟ್
ಮಂಗಳವರ ಆಪ್ ಮೂಲಕ ದಿನಸಿ ಆರ್ಡರ್ ಮಾಡಿದ್ದ ಬ್ರೆಜಿಲ್ ಮೂಲದ ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಡೆಲಿವರಿ ಬಾಯ್ ಕುಮಾರ್ ರಾಮನನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ಆರೋಪಿ ಅಕ್ಟೋಬರ್ 17ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಮಾಡೆಲ್ ಜೊತೆ ಅನುಚಿತವಾಗಿ ವರ್ತಿಸಿ ಮೈ ಮುಟ್ಟಲು ಯತ್ನಿಸಿದ್ದಾನೆ. ಆತಂಕಗೊಂಡ ಮಾಡಲ್ ಕಿರಿಚಿಕೊಂಡು ಬಾಗಿಲು ಲಾಕ್ ಮಾಡಿಕೊಂಡಿದ್ದರಿಂದ ಸಂತ್ರಸ್ತೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿಷಯ ತಡವಾಗಿ ಬೆಳಕಿಗೆ ಬಂದಿದೆ
