ವರದಿಗಾರರು :
ಶ್ರೀನಿವಾಸ್ ಹೆಚ್ , ||
ಸ್ಥಳ :
ತುಮಕೂರು
ವರದಿ ದಿನಾಂಕ :
25-09-2025
ತುರುವೇಕೆರೆ ತಾಲ್ಲೂಕಿನ 15 ಸಾವಿರ ರಾಸುಗಳಿಗೆ ಜೀವವಿಮೆ – ಹಾಲು ಒಕ್ಕೂಟದಿಂದ 30 ಕೋಟಿ ಮೀಸಲು"
ತುರುವೇಕೆರೆ: ತಾಲ್ಲೂಕಿನಲ್ಲಿ 15 ಸಾವಿರಕ್ಕೂ ಹೆಚ್ಚು ರಾಸುಗಳಿಗೆ ವಿಮೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಸಿ.ವಿ. ಮಹಲಿಂಗಯ್ಯ ತಿಳಿಸಿದ್ದಾರೆ.
ತಾಲ್ಲೂಕಿನ ಕಸಬಾ ವ್ಯಾಪ್ತಿಯ ಮಾದಿಹಳ್ಳಿಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಸುಗಳ ಕಿವಿಗಳಿಗೆ ಓಲೆ ಹಾಕುವ ಮೂಲಕ ವಿಮೆ ಯೋಜನೆಗೆ ಚಾಲನೆ ನೀಡಿದರು.
ಈ ಬಾರಿ ರಾಸುಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ₹10,000ರಿಂದ ₹70,000ರವರೆಗೆ ವಿಮೆ ಸೌಲಭ್ಯ ವಿಸ್ತರಿಸಲಾಗಿದೆ. ಇದಕ್ಕಾಗಿ ನಾಲ್ಕು ತಿಂಗಳ ಕಾಲಾವಕಾಶ ನೀಡಲಾಗಿದ್ದು, ಜಿಲ್ಲೆಯ ಮಟ್ಟದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ರಾಸುಗಳಿಗೆ ವಿಮೆ ಮಾಡಲಾಗುತ್ತಿದೆ. ಈ ಯೋಜನೆಗಾಗಿ ₹30 ಕೋಟಿಯನ್ನು ಬಜೆಟ್ನಲ್ಲಿ ಮೀಸಲಿರಿಸಲಾಗಿದೆ ಎಂದು ಮಹಲಿಂಗಯ್ಯ ಹೇಳಿದರು.
