ವರದಿಗಾರರು :
ಯೋಗೀಶ.ವಿ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
11-04-2025
ಬೆಂಗಳೂರು ಸದ್ದಿಲ್ಲದೆ ನಮ್ಮ ಉಳಿತಾಯವನ್ನು ತಿನ್ನುತ್ತಿದೆ’: ಸ್ಟಾರ್ಟ್-ಅಪ್ ಉದ್ಯಮಿಯ ಪೋಸ್ಟ್ ವೈರಲ್*
ಕರ್ನಾಟಕದಲ್ಲಿ ಹಾಲು, ವಿದ್ಯುತ್, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ಇದರಿಂದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಓರ್ವ ಸ್ಟಾರ್ಟ್‌ಅಪ್ ಉದ್ಯಮಿ ಈ ಬಗ್ಗೆ ಲಿಂಕ್ಡ್ಇನ್ನಲ್ಲಿ ಪೋಸ್ಟ್ ಹಾಕಿದ್ದು, ಸಾಕಷ್ಟು ವೈರಲ್ ಆಗಿದೆ. ಬೆಲೆ ಏರಿಕೆ ಮತ್ತು ವೆಚ್ಚ ಹೆಚ್ಚಳದಿಂದಾಗಿ ಬೆಂಗಳೂರು ಜನರಿಗೆ ಕೈಗೆಟುಕದ ನಗರವಾಗುತ್ತಿದೆ ಎಂದು ಉದ್ಯಮಿ ಹೇಳಿದ್ದಾರೆ.
ಬೆಂಗಳೂರು, ಏಪ್ರಿಲ್ 11: ಕರ್ನಾಟಕದಲ್ಲಿ ಒಂದಾದ ಮೇಲೊಂದರಂತೆ ದಿನಬಳಕೆಯ ವಸ್ತುಗಳು ಸೇರಿದಂತೆ ಸಾರ್ವಜನಿಕ ಸೇವೆಗಳ ದರ (price hike) ಕೂಡ ಏರಿಕೆ ಮಾಡಲಾಗುತ್ತಿದೆ. ಈಗಾಗಲೇ ನಂದಿನಿ ಹಾಲು ಮೆಟ್ರೋ, ವಿದ್ಯುತ್, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಲಾಗಿದೆ. ಈ ರೀತಿ ಬೆಲೆ ಏರಿಕೆಯಿಂದ ಜೀವನ ನಡೆಸುವುದಾದರೂ ಹೇಗೆ ಎಂದು ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವೆಡೆ ಪ್ರತಿಭಟನೆ ಕೂಡ ಮಾಡಲಾಗಿದೆ. ಹೀಗಿರುವಾಗಲೇ ಬೆಂಗಳೂರಿನ ಸ್ಟಾರ್ಟ್-ಅಪ್ ಕಂಪನಿ ಉದ್ಯಮಿ (businessman) ಒಬ್ಬರ ಲಿಂಕ್ಡ್ಇನ್ ಪೋಸ್ಟ್ ಸಾಕಷ್ಟು ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.
ಉದ್ಯಮಿಯ ಲಿಂಕ್ಡ್ಇನ್ನಲ್ಲಿ ಪೋಸ್ಟ್ನಲ್ಲಿ ಏನಿದೆ? ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ಕಂಪನಿ ಉದ್ಯಮಿ ಹರೀಶ್ ಎನ್ಎ ಎಂಬುವವರು ರಾಜ್ಯದಲ್ಲಿ ಹೆಚ್ಚುತ್ತಿರುವ ದರ ಏರಿಕೆ ಕುರಿತಾಗಿ ಲಿಂಕ್ಡ್ಇನ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಜನರು ಕಷ್ಟಪಟ್ಟು ಉಳಿತಾಯ ಮಾಡಿರುವ ತಮ್ಮ ಹಣ, ದೈನಂದಿನ ಖರ್ಚು ವೆಚ್ಚಗಳಿಗೆ ಸದ್ದಿಲ್ಲದೆ ಖಾಲಿಯಾಗುತ್ತಿರುವ ಬಗ್ಗೆ ಅವರು ವಿವರಿಸಿದ್ದಾರೆ.
