ವರದಿಗಾರರು :
ಗಿರೀಶ್ ಡಿ ಎಸ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
20-10-2025
ತುಮಕೂರು ಜಿಲ್ಲೆಯಲ್ಲಿ ಸತೀಶ್ ಸುವರ್ಣರಿಂದ ಪೂಜಾ ಕಾರ್ಯಕ್ರಮಕ್ಕೆ ಚಾಲನೆ
ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ಅವರು ದೀಪ ಬೆಳಗಿಸುವ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗಣ ಹೋಮ, ವಾಹನ ಪೂಜೆ ಹಾಗೂ ಲಕ್ಷ್ಮಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗುರುಕುಲ ಮಠದ ಇಮ್ಮಡಿ ಬಸವ ದೇಶೀ ಕೇಂದ್ರ ಸ್ವಾಮೀಜಿ ಆಗಮಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಕೆ. ಷಡಕ್ಷರಿ, ತಹಶೀಲ್ದಾರ್ ಮೋಹನ್, ನಿವೃತ್ತ ಎಸಿಪಿ ಲೋಕೇಶ್ವರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು, ಒಕ್ಕೂಟ ಪದಾಧಿಕಾರಿಗಳು, ತಾಲೂಕು ಗಣ್ಯರು, ಪತ್ರಕರ್ತರು ಹಾಗೂ ಯೋಜನೆಯ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
