ವರದಿಗಾರರು :
ತೌಕೀರ್ ಖತೀಬ್ ||
ಸ್ಥಳ :
ಬೆಳಗಾವಿ
ವರದಿ ದಿನಾಂಕ :
17-12-2025
ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ರೈತರಿಗೆ ಸಂಕಷ್ಟ: NAFED ಮೂಲಕ ನೇರ ಖರೀದಿಗೆ ಕೇಂದ್ರಕ್ಕೆ ಕರಾಡಿ ಆಗ್ರಹ”
ಕರ್ನಾಟಕದಲ್ಲಿ ಕಾಂಗ್ರೇಸ ಸರ್ಕಾರದ ವೈಪಲ್ಯದಿಂದ ರೈತರ ಬೆಳೆಗಳ ಖರೀದಿ ಪ್ರಕ್ರಿಯೆಯಲ್ಲಿ ವಿಳಂಭವಾದ ಕಾರಣ ಮುಂಗಾರು ಹಂಗಾಮಿನಲ್ಲಿ ಬೆಳೆದ ಎಲ್ಲಾ ಬೆಳೆಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಮೂಲಕ ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ.
ಆದಕಾರಣ ಹಿಂಗಾರು ಹಂಗಾಮಿಗಾದರೂ ಕೇಂದ್ರ ಸರ್ಕಾರ ರೈತರ ನೆರವಿಗೆ ಬರಬೇಕಾದದ್ದು ಅತ್ಯಂತ ಅಗತ್ಯವಿದೆ. ಭಾರತ ಸರ್ಕಾರದ ಸಂಸ್ಥೆಯಾಗಿರುವ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ಮೂಲಕ ನೇರ ಖರೀದಿ ಮಾಡುವ ಕ್ರಮ ಕೈಗೊಳ್ಳಬೇಕೆಂದು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ ವೇಳೆಯಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕರಾಡಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.
