ಲೈವ್ ಟಿವಿ ನ್ಯೂಸ್

ದಿನಾಂಕ : 17-09-2025

ಕಲಬುರಗಿ ಇ-ಖಾತಾ ವಿತರಣೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ವರದಿಗಾರರು : ಮಲ್ಲಿಕಾರ್ಜುನ್
ವರದಿ ಸ್ಥಳ :ಕಲಬುರ್ಗಿ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 18+

ಕಲಬುರಗಿ: ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಗರದ ಏಳು ಕಡೆ ಸೋಮವಾರ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಹಲವು ದಾಖಲೆ ಪತ್ರಗಳನ್ನು ಶೋಧ ನಡೆಸಿದರು. ದಾಳಿಯಲ್ಲಿ ಮೂರು ಖಾಸಗಿ ಕಚೇರಿಗಳಲ್ಲಿ ಪಾಲಿಕೆಯ ಸರ್ಕಾರಿ ಕಡತಗಳು, ಪಾಲಿಕೆಯ ರೆಜಿಸ್ಟರ್ ಹಾಗೂ ₹8.36 ಲಕ್ಷ ನಗದು ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.

ಸೋಮವಾರ ಮಧ್ಯಾಹ್ನ 12 ಗಂಟೆ ಹೊತ್ತಿಗೆ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳು ಏಳು ತಂಡಗಳಾಗಿ ಏಳು ಕಡೆಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪ್ರತಿ ತಂಡದಲ್ಲಿ 5-6 ಮಂದಿ ಇದ್ದಾರೆ. ಪಾಲಿಕೆಯ ವಲಯ ಕಚೇರಿ-1, ವಲಯ ಕಚೇರಿ-2, ವಲಯ ಕಚೇರಿ-3 ಹಾಗೂ ನಗರದ ಸ್ನೇಹಾ ಬಿಲ್ಡರ್ಸ್ ರಿಯಲ್ ಸ್ಟೇಟ್ ಸೆಂಟರ್, ಇನಾ ಟೆಕ್ನಿಕಲ್ ಕನ್ಸಲ್ಟೆನ್ಸಿ, ಪಾಲಿಕೆ ಕಚೇರಿ ಆವರಣದ ಜೆರಾಕ್ಸ್ ಮತ್ತು ಡಿಟಿಪಿ ಸೆಂಟರ್ ಹಾಗೂ ಎಸ್.ಬಿ. ಬಿಲ್ಡರ್ಸ್ ಅಂಡ್ ಪ್ಲಾನರ್ಸ್ ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದರು.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand