ವರದಿಗಾರರು :
ದರ್ಶನ್ ಎಂ ಎನ್ ||
ಸ್ಥಳ :
ದಾವಣಗೆರೆ
ವರದಿ ದಿನಾಂಕ :
26-12-2025
ವಿದ್ಯಾನಗರ ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಮಾರಾಟ-ಸೇವನೆ; ನಾಲ್ವರು ಬಂಧನ
ವಿದ್ಯಾನಗರ ಪೊಲೀಸರು ಕಾರ್ಯಚರಣೆ ನಡೆಸಿ, ಅಕ್ರಮವಾಗಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ 04 ಆರೋಪಿತರನ್ನು ಬಂಧಿಸಿದ್ದಾರೆ.
ಆರೋಪಿತರಿಂದ ಅಂದಾಜು 10 ಲಕ್ಷ ಮೌಲ್ಯದ ಒಟ್ಟು 90 ಗ್ರಾಂ ಎಂ.ಡಿ.ಎಂ.ಎ ಹಾಗೂ 200 ಗ್ರಾಂ ಓಪಿಯಂ ಎಂಬ ಮಾದಕ ವಸ್ತುಗಳನ್ನು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡಿದ ಹಣ ರೂ 1,00,000/- ನಗದು ಹಣ ಸೇರಿದಂತೆ 11 ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
