ವರದಿಗಾರರು :
ಫಯಾಜ್ ತೇಲಿ ||
ಸ್ಥಳ :
ಧಾರವಾಡದ
ವರದಿ ದಿನಾಂಕ :
28-10-2025
ಧಾರವಾಡದಲ್ಲಿ ಡಿಜಿ ಮತ್ತು ಐಜಿಪಿ ಪ್ರಗತಿ ಪರಿಶೀಲನಾ ಸಭೆ
ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಅವರು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ನಿನ್ನೆ (ಅ.26) ಸಂಜೆ ಭೇಟಿ ನೀಡಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಪೊಲೀಸ್ ಸೇವೆ ಜನ ಸ್ನೇಹಿಯಾಗಿರಬೇಕು, ಸಾರ್ವಜನಿಕರ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ ಎಂದು ಹೇಳಿದರು. ‘ಮನೆ ಮನೆಗೆ ಪೊಲೀಸ್’ ಉಪಕ್ರಮ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದ್ದು, ಅಭಾಧಿತರು ಹಾಗೂ ನೊಂದ ಜನರ ಪರವಾಗಿ ಪೊಲೀಸರು ಹೆಚ್ಚು ಸಂವೇದನಾಶೀಲವಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಪೊಲೀಸ್ ಸಿಬ್ಬಂದಿಯ ಆರೋಗ್ಯ ಮತ್ತು ಕ್ಷೇಮದ ಕಡೆ ವಿಶೇಷ ಗಮನ ಹರಿಸಬೇಕೆಂದೂ ಅವರು ಸೂಚಿಸಿದರು. ನಂತರ ಸಿ.ಐ.ಡಿ ಘಟಕ ಹಾಗೂ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿ ಮಾರ್ಗದರ್ಶನ ನೀಡಿದರು.
ಈ ವೇಳೆ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನಸಿಂಗ್ ರಾಥೋಡ್, ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಹಾಗೂ ಸಿ.ಐ.ಡಿ ಎಸ್‌ಪಿ ರಶ್ಮಿ ಪರಡಿ ಉಪಸ್ಥಿತರಿದ್ದರು.
