ವರದಿಗಾರರು :
ನರೇಂದ್ರ ಬಾಬು ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
03-03-2025
ಬೆಂಗಳೂರು ಪೂರ್ವ ನಿಲ್ದಾಣದಲ್ಲಿ ಹಳಿ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 13ರಿಂದ ನಿಲ್ದಾಣವನ�
ಬೆಂಗಳೂರು ಪೂರ್ವ ನಿಲ್ದಾಣದಲ್ಲಿ ಈಗ ಇರುವ ಎತ್ತರ-ತಗ್ಗಿನ ಪ್ಲಾಟ್‌ಫಾರ್ಮ್‌ಗಳನ್ನು ತೆಗೆದು ಹಾಕಿ ಮೂರು ಮತ್ತು ನಾಲ್ಕನೇ ಹಳಿಗಳನ್ನು ಹಾಕಲು ಯೋಜನೆ ರೂಪಿಸಲಾಗಿದೆ.
ಮಾರ್ಚ್ 13ರಿಂದ ಕಾಮಗಾರಿ ಆರಂಭಿಸಲು ನಿರ್ಧರಿಸಲಾಗಿದೆ. ಈ ಮಾರ್ಗದಲ್ಲಿ 15 ಎಕ್ಸ್‌ಪ್ರೆಸ್ ಮತ್ತು 26 ಪ್ಯಾಸೆಂಜರ್, ಮೆಮು ಸೇರಿ 41 ರೈಲುಗಳ ನಿಲುಗಡೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ಕೆಎಸ್‌ಆರ್ ಬೆಂಗಳೂರು-ಬಂಗಾರಪೇಟೆ-ಬೆಂಗಳೂರು, ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು, ತಿರುಪತಿ-ಚಾಮರಾಜನಗರ, ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್‌ಆರ್ ಬೆಂಗಳೂರು, ಕಡಲೂರು ಪೋರ್ಟ್-ಮೈಸೂರು, ಸಿಎಸ್‌ಎಂಟಿ ಮುಂಬೈ-ಕೆಎಸ್‌ಆರ್ ಬೆಂಗಳೂರು, ತೂತುಕುಡಿ-ಮೈಸೂರು, ಕಾಚಿಗುಡ-ಮೈಸೂರು, ಕನ್ಯಾಕುಮಾರಿ-ಕೆಎಸ್‌ಆರ್ ಬೆಂಗಳೂರು, ಜೋಲಾರಪೇಟೆ-ಕೆಎಸ್‌ಆರ್ ಬೆಂಗಳೂರು, ಭುವನೇಶ್ವರ-ಕೆಎಸ್‌ಆರ್ ಬೆಂಗಳೂರು, ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಮತ್ತೂರು, ದರ್ಭಾಂಗ-ಮೈಸೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಇರುವುದಿಲ್ಲ.
ಕೆಎಸ್‌ಆರ್ ಬೆಂಗಳೂರು-ಧರ್ಮಾವರಂ-ಬೆಂಗಳೂರು, ಕೆಎಸ್‌ಆರ್ ಬೆಂಗಳೂರು-ಮಾರಿಕುಪ್ಪಂ-ಬೆಂಗಳೂರು, ಕೆಎಸ್‌ಆರ್ ಬೆಂಗಳೂರು-ಬಂಗಾರಪೇಟೆ-ಬೆಂಗಳೂರು, ಕೆಎಸ್‌ಆರ್ ಬೆಂಗಳೂರು-ಧರ್ಮಪುರಿ-ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್-ಕೋಲಾರ- ಕಂಟೋನ್ಮೆಂಟ್, ಕೆಎಸ್‌ಆರ್ ಬೆಂಗಳೂರು-ಕೋಲಾರ, ಕೆಎಸ್‌ಆರ್ ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಬೆಂಗಳೂರು, ಕೆಎಸ್‌ಆರ್ ಬೆಂಗಳೂರು-ಜೋಲಾರಪೇಟೆ-ಬೆಂಗಳೂರು, ಕೆಎಸ್‌ಆರ್ ಬೆಂಗಳೂರು-ವೈಟ್ ಫೀಲ್ಡ್-ಕೆಎಸ್‌ಆರ್ ಬೆಂಗಳೂರು, ಕೆಎಸ್‌ಆರ್ ಬೆಂಗಳೂರು-ಬಂಗಾರಪೇಟೆ, ಕುಪ್ಪಂ-ಕೆಎಸ್‌ಆರ್ ಬೆಂಗಳೂರು ರೈಲುಗಳು ಪ್ಯಾಸೆಂಜರ್ ಮತ್ತು ಮೆಮು ರೈಲುಗಳು ರದ್ದಾಗಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
