ವರದಿಗಾರರು :
ಸಾತಪ್ಪ ಮಾಂಗ್ಲಿ ||
ಸ್ಥಳ :
ಧಾರವಾಡ
ವರದಿ ದಿನಾಂಕ :
28-11-2025
ಕಲಘಟಗಿಯಲ್ಲಿ ಬಿಜೆಪಿ ರೈತ ಮೋರ್ಚಾ ಭಾರೀ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಧಾರವಾಡ ಗ್ರಾಮಾಂತರ ಕಲಘಟಗಿ ಮಂಡಲ ರೈತ ಮೋರ್ಚಾದ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಭಾರೀ ಪ್ರತಿಭಟನೆ ಜರುಗಿತು. ಸಾವಿರಾರು ಕಾರ್ಯಕರ್ತರು ಮತ್ತು ರೈತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಪ್ರತಿಭಟನಾ ಮೆರವಣಿಗೆ ತಹಸೀಲ್ದಾರ ಕಚೇರಿಗೆ ತೆರಳಿ ಮನವಿಯನ್ನು ಸಲ್ಲಿಸಿತು. ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಾಯಕರು, ರೈತರ ಹಿತಕ್ಕಾಗಿ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಜನಪ್ರತಿನಿಧಿಗಳು, ಬಿಜೆಪಿ ವಿವಿಧ ಮೋರ್ಚೆಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ರೈತರು ಸೇರಿದಂತೆ ಹಿರಿಯ–ಕಿರಿಯ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
