ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ಕುರುಟಗೆರೆ: “ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ – 2025” ಕಾರ್ಯಕ್ರಮ ಉದ್ಘಾಟನೆ
ತುಮಕೂರು: ಭ್ರಷ್ಟಾಚಾರವನ್ನು ಕೇವಲ ಹಣದ ವ್ಯವಹಾರ ಎಂದು ನೋಡುವುದರಲ್ಲಿ ತಪ್ಪು ಇದೆ; ಇದು ನೈತಿಕ ಮೌಲ್ಯಗಳ ಕುಸಿತವಾಗಿದ್ದು, ಶುದ್ಧ ಆಡಳಿತಕ್ಕೆ ಪಾರದರ್ಶಕತೆ, ನೈತಿಕತೆ ಮತ್ತು ಹೊಣೆಗಾರಿಕೆ ಅಗತ್ಯ ಎಂದು ತುಮಕೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಶಿವರುದ್ರಪ್ಪ ಮೇಟಿ ಹೇಳಿದರು. ಶಿವರುದ್ರಪ್ಪ ಮೇಟಿ ಅವರು ಕೊರಟಗೆರೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ “ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ – 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಾಗ, ಜನರ ಸಹಕಾರವಿಲ್ಲದೆ ಭ್ರಷ್ಟಾಚಾರ ವಿರೋಧಿ ಚಳವಳಿ ಯಶಸ್ವಿಯಾಗುವುದಿಲ್ಲ ಎಂದು ಒತ್ತಿ ಹೇಳಿದರು. ಅವರು ಭ್ರಷ್ಟಾಚಾರದ ಕುರಿತಾದ ಶುದ್ಧತೆಯನ್ನು ಕಾಪಾಡಿಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ತಹಶೀಲ್ದಾರ್ ಮಂಜುನಾಥ ಕೆ. ಅವರು ತಮ್ಮ ಭಾಷಣದಲ್ಲಿ, ಭ್ರಷ್ಟಾಚಾರ ನಿರ್ಮೂಲನೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಹೇಳಿದ್ದಾರೆ. ಕಾನೂನಿನಲ್ಲಿ ಭ್ರಷ್ಟಾಚಾರದ ವಿರುದ್ಧ ಕಠಿಣ ಶಿಕ್ಷೆಗಳಿದ್ದರೂ, ಜನರು ತಮ್ಮ ಹಕ್ಕುಗಳನ್ನು ಅರಿತು ಧೈರ್ಯದಿಂದ ದೂರು ನೀಡಬೇಕು. ಪಾರದರ್ಶಕ ಆಡಳಿತಕ್ಕೆ ತಂತ್ರಜ್ಞಾನ ಉಪಯುಕ್ತವಾಗಿದ್ದು, ಅದನ್ನು ಎಚ್ಚರಿಕೆಯಿಂದ ಬಳಸಬೇಕು ಎಂದರು. ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಿ. ಅವರು, ಸರ್ಕಾರಿ ಸೇವೆ ಒಂದು ಕರ್ತವ್ಯ ಮತ್ತು ಸೇವಾ ಧರ್ಮ ಎಂದು ಹೇಳಿದರು. ಅಧಿಕಾರಿಗಳು ಜನರ ವಿಶ್ವಾಸ ಗೆಲ್ಲಲು ಭ್ರಷ್ಟಾಚಾರದಿಂದ ದೂರ ಇರುವ ನೈತಿಕ ಬದ್ಧತೆಯನ್ನು ಪಾಲಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಪ್ರಮುಖ ಅಂಶವಾಗಿ, ತಾಲೂಕು ಮಟ್ಟದ ಅಧಿಕಾರಿಗಳು, ನೌಕರರು ಮತ್ತು ಸಾರ್ವಜನಿಕರಿಗೆ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯ್ತಿಯ ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕ ಗುರುಮೂರ್ತಿ, ವಿವಿಧ ಇಲಾಖೆಗಳ ಸಿಬ್ಬಂದಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು. ಭ್ರಷ್ಟಾಚಾರ ನಿರ್ಮೂಲನೆಗೆ ಶುದ್ಧ ಆಡಳಿತ ಮತ್ತು ನಾಗರಿಕರ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ ಎಂಬ ಸಂದೇಶ ಈ ಕಾರ್ಯಕ್ರಮದ ಮೂಲಕ ಮುಂದುವರಿಯಿತು
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
