ವರದಿಗಾರರು :
ಗೌತಮ್ ಸಿ ಎಸ್ ||
ಸ್ಥಳ :
ಪಿರಿಯಾಪಟ್ಟಣ
ವರದಿ ದಿನಾಂಕ :
15-11-2025
ಎ.ಎಸ್. ಪೊನ್ನಣ್ಣ ವಿರುದ್ಧ ಅವಹೇಳನ: ಮಡಿಕೇರಿಯಲ್ಲಿ ದೂರು, ಕಠಿಣ ಕ್ರಮಕ್ಕೆ ಆಗ್ರಹ
ಸಾಮಾಜಿಕ ಜಾಲತಾಣದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ರವರ ಬಗ್ಗೆ ಅವಹೇಳನಕಾರಿ ಮತ್ತು ಅವಾಚ್ಯ ಶಬ್ಧಗಳನ್ನು ಬಳಸಿದ ಪ್ರಕರಣದ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಠಾಣೆಯಲ್ಲಿ ವಕೀಲ ಪವನ್ ಪೆಮ್ಮಯ್ಯ ದೂರು ದಾಖಲಿಸಿದ್ದಾರೆ.
ಪವನ್ ಪೆಮ್ಮಯ್ಯ ಮಾತನಾಡಿ, ಆರೋಪಿಯನ್ನು ಶೀಘ್ರ ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸ್ ಇಲಾಖೆ ಪ್ರಕರಣವನ್ನು ದಾಖಲಿಸಿ ಮುಂದಿನ ತನಿಖೆ ಆರಂಭಿಸಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
