ವರದಿಗಾರರು :
ನಾಗರಾಜ್, ||
ಸ್ಥಳ :
ಬಳ್ಳಾರಿ
ವರದಿ ದಿನಾಂಕ :
04-11-2025
ಜನಜಾತಿ ಗೌರವ ದಿನ ಆಚರಣೆಗಾಗಿ ಬಿಜೆಪಿ ಎಸ್‌ಟಿ ಮೋರ್ಚಾದ ಸಿದ್ಧತಾ ಸಭೆ
ಭಾರತೀಯ ಜನತಾ ಪಕ್ಷದ ರಾಜ್ಯ ಎಸ್‌ಟಿ (ಅಧಿಸೂಚಿತ ಜನಾಂಗ) ಘಟಕದ ವತಿಯಿಂದ ಬುಡಕಟ್ಟು ಸಮುದಾಯಗಳ ಹೋರಾಟದ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮಜಯಂತಿ ಅಂಗವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಪೂರ್ವಭಾವಿ ಸಭೆ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ್ ಭವನದಲ್ಲಿ ನಡೆಯಿತು.
ಈ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಸವರಾಜು ಋತ್ತಿಮಠ, ಶಾಸಕರು, ಹಾಗೂ ಎಸ್‌ಟಿ ಘಟಕದ ನಾಯಕರು ಭಾಗವಹಿಸಿದರು.
ಸಭೆಯನ್ನು ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರ ಹನುಮಂತಪ್ಪ ಅವರು ನಡೆಸಿ, ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವಾದ ನವೆಂಬರ್ 15 ಅನ್ನು *“ಜನಜಾತಿ ಗೌರವ ದಿನ”*ವಾಗಿ ಆಚರಿಸಲು ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕರೆ ನೀಡಿದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
