ವರದಿಗಾರರು :
ಕೆಂಡೇಶ್ ಸೂರ್ಯ ||
ಸ್ಥಳ :
ಹುಣಸೂರು
ವರದಿ ದಿನಾಂಕ :
01-11-2025
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ಮತ್ತೆ ಹುಲಿ ದಾಳಿ – ರೈತ ಬಲಿ
ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕೂಡುಗಿ ಗ್ರಾಮದಲ್ಲಿ ಮತ್ತೆ ಹುಲಿ ದಾಳಿ ಸಂಭವಿಸಿ, ಸ್ಥಳೀಯ ರೈತ ದೊಡ್ಡ ನಿಂಗಯ್ಯ ಎಂಬವರು ಪ್ರಾಣ ಕಳೆದುಕೊಂಡಿದ್ದಾರೆ.
ಮಾಹಿತಿಯ ಪ್ರಕಾರ, ನಿಂಗಯ್ಯ ಅವರು ಇಂದು ಬೆಳಗ್ಗೆ ತಮ್ಮ ಹೊಲದಲ್ಲಿ ದನ ಮೇಯಿಸುತ್ತಿದ್ದ ವೇಳೆ ಹುಲಿ ಹಠಾತ್ ದಾಳಿ ನಡೆಸಿದೆ. ಘಟನೆಯಲ್ಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ತಿಂಗಳಲ್ಲೇ ಸರಗೂರು ತಾಲ್ಲೂಕಿನಲ್ಲಿ ಇದು ಮೂರನೇ ಹುಲಿ ದಾಳಿ ಆಗಿದ್ದು, ಇದುವರೆಗೆ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸತತ ದಾಳಿಗಳ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮಸ್ಥರು ಅರಣ್ಯ ಸಚಿವರ ವಿರುದ್ಧ ಕಿಡಿಕಾರಿದ್ದು, "ನಮ್ಮ ಬೇಡಿಕೆಗಳಿಗೆ ಯಾವುದೇ ಸ್ಪಂದನೆ ಇಲ್ಲ. ಕ್ರಮ ಕೈಗೊಳ್ಳದೇ ಇದ್ದರೆ ರಾಜೀನಾಮೆ ನೀಡಬೇಕು," ಎಂದು ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯ ಹಾದಿ ಪತ್ತೆ ಹಚ್ಚಲು ತಕ್ಷಣವೇ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
