ವರದಿಗಾರರು :
ಸಿಂಚನ ||
ಸ್ಥಳ :
ಬೆಂಗಳೂರೂ
ವರದಿ ದಿನಾಂಕ :
03-11-2025
ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್ ನೀಡಿದ ಆಹಾರ ಇಲಾಖೆ
ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಅಕ್ಟೋಬರ್ ತಿಂಗಳಲ್ಲಿ 6200 ಮಂದಿ ಅನರ್ಹ ಬಿಪಿಎಲ್ ಪಡಿತರ ಚೀಟಿ ಹೊಂದಿದವರನ್ನು ಪತ್ತೆ ಮಾಡಿ ಅವರ ಕಾರ್ಡ್ಗಳನ್ನು ಎ ಪಿ ಎಲ್ ಗೆ ವರ್ಗಾಯಿಸಿದೆ. ಬ್ಯಾಂಕ್ ಖಾತೆಗೆ ಜೋಡಣೆ ಆದ ಆಧಾರ್ ಸಂಖ್ಯೆ ಹಾಗೂ ಐಟಿ ರಿಟರ್ನ್ಸ್ ರಸೀದಿ ಆದರಿಸಿ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಯಿಂದ ಪಡೆದು ಈ ಅನಹರನ್ನು ಗುರುತಿಸಲಾಗಿದೆ, ಈ ಪ್ರಕ್ರಿಯೆ ಮುಂದುವರೆಯಲಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಜಂಟಿ ನಿರ್ದೇಶಕ ಅವಿನ್ ತಿಳಿಸಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
