ವರದಿಗಾರರು :
ಎಚ್ ಎಮ್ ಹವಾಲ್ದಾರ ||
ಸ್ಥಳ :
ಯಾದಗಿರಿ
ವರದಿ ದಿನಾಂಕ :
21-11-2025
ಅಪ್ರಾಪ್ತ ಗರ್ಭಿಣಿ ಪ್ರಕರಣ: ಕ್ರಮ ಕೈಗೊಳ್ಳದ ಯಾದಗಿರಿ ಪೊಲೀಸರಿಗೆ ಮಕ್ಕಳ ಆಯೋಗದ ನೋಟಿಸ್”
ಯಾದಗಿರಿ ಜಿಲ್ಲೆ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ತನ್ನ ಹೆಂಡತಿಯ ಅಪ್ರಾಪ್ತ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭಯಾನಕ ಘಟನೆ ಬೆಳಕಿಗೆ ಬಂದಿದೆ. ದೌರ್ಜನ್ಯದಿಂದಾಗಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ. ಈ ಕುರಿತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶೀಧರ್ ಕೋಸುಂಭೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. “ಯಾದಗಿರಿ ಜಿಲ್ಲೆಯಲ್ಲಿ ಅಪ್ರಾಪ್ತರ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯ ಪ್ರಕರಣಗಳು ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗಿವೆ. ನಡೆದ ಘಟನೆಗೂ ಸತ್ತ್ವದಲ್ಲಿಯೇ ಪ್ರಕರಣ ದಾಖಲಿಸದೇ ಇರುವುದೇ ಅತ್ಯಂತ ದುರ್ದೈವ,” ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಮಕ್ಕಳ ಆಯೋಗವು ಮಕ್ಕಳ ರಕ್ಷಣಾಧಿಕಾರಿಗೆ ತಕ್ಷಣ ಪ್ರಕರಣ ದಾಖಲಿಸಿ, ಅಪ್ರಾಪ್ತೆಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ ಎಂದು ಸದಸ್ಯ ಶಶೀಧರ್ ಕೊಸುಂಭೆ ತಿಳಿಸಿದ್ದಾರೆ
