ವರದಿಗಾರರು :
ಮೀನಾಕ್ಷಿ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
21-03-2025
ಮಹೇಶ್ ಬಾಬು ಜೊತೆ ನಟಿಸಲು ಪ್ರಿಯಾಂಕಾ ಚೋಪ್ರಾಗೆ 30 ಕೋಟಿ ಸಂಭಾವನೆ
ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಅವರು ಸ್ಟಾರ್ ನಟಿಯರಾದ ಆಲಿಯಾ ಭಟ್, ಕರೀನಾ ಕಪೂರ್, ದೀಪಿಕಾ ಪಡುಕೋಣೆ, ನಯನತಾರಾರನ್ನೇ ಹಿಂದಿಕ್ಕಿದ್ದಾರೆ. ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲಿ ನಟಿಸಲು ಪ್ರಿಯಾಂಕಾ ಚೋಪ್ರಾ 30 ಕೋಟಿ ರೂ. ಸಂಭಾವನೆಗೆ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಸ್ಟಾರ್ ನಟಿಯರಿಗೆ ಪ್ರಿಯಾಂಕಾ ಸೆಡ್ಡು ಹೊಡೆದಿದ್ದಾರೆ. ಕಿಯಾರಾ, ಆಲಿಯಾ, ದೀಪಿಕಾ ಪಡುಕೋಣೆ ಸೇರಿದಂತೆ ಕೆಲ ಟಾಪ್ ನಟಿಯರು ಒಂದು ಸಿನಿಮಾಗೆ 5ರಿಂದ 15 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಹೀಗಿರುವಾಗ 30 ಕೋಟಿ ರೂ. ಸಂಭಾವನೆಯನ್ನು ಪ್ರಿಯಾಂಕಾ ಪಡೆಯುವ ಮೂಲಕ ಎಲ್ಲರ ಹುಬ್ಬೆರಿಸಿದ್ದಾರೆ. ಒಂದು ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಭಾರತದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
