ವರದಿಗಾರರು :
ನರೇಂದ್ರ ಬಾಬು ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
04-03-2025
ಕರಾವಳಿ-ಬೆಂಗಳೂರು ಪ್ರಯಾಣಿಕರಿಗೆ ಸಿಹಿಸುದ್ದಿ!
ಮಾರ್ಚ್ 04: ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವ ಸಂಪರ್ಕ ಕಲ್ಪಿಸುವ ಎರಡು ರೈಲುಗಳ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಸಿಹಿಸುದ್ದಿಯನ್ನು ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಕ್ಕೆ ಸಂಚಾರ ನಡೆಸುವ ಜನರಿಗೆ ಈ ರೈಲು ಸೇವೆ ಸಹಕಾರಿಯಾಗಿದೆ.
ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ಬಳಿಕ ಬೆಂಗಳೂರು ಕರಾವಳಿ ನಡುವೆ ಸಂಚಾರ ನಡೆಸುವ ರೈಲುಗಳಲ್ಲಿ ಈ ಮಾದರಿ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಎರಡು ರೈಲುಗಳನ್ನು ಸಂಪೂರ್ಣ ಎಲ್‌ಹೆಚ್‌ಬಿ ಕೋಚ್‌ಗಳಾಗಿ ಪರಿವರ್ತನೆ ಮಾಡಲಾಗುತ್ತದೆ ಎಂದು ತಿಳಿಸಿದೆ. ಮೇ ತಿಂಗಳಿನಿಂದ ರೈಲುಗಳು ಎಲ್‌ಹೆಚ್‌ಬಿ ಕೋಚ್‌ಗಳಾಗಿ ಸಂಚಾರವನ್ನು ನಡೆಸಲಿವೆ.
