
ಲೈವ್ ಟಿವಿ ನ್ಯೂಸ್

ದಿನಾಂಕ : 17-09-2025
ಬೆಳೆನಷ್ಟದಿಂದ ನೊಂದಿರುವ ಎಲ್ಲ ರೈತರಿಗೆ ಪರಿಹಾರ ಕಲ್ಪಿಸಲು ಪ್ರಮಾಣಿಕವಾಗಿ ಕೆಲಸ ಮಾಡಿ
ವರದಿಗಾರರು : ಹುಲಗಪ್ಪ ಎಮ್ ಹವಾಲ್ದಾರ
ವರದಿ ಸ್ಥಳ :ಯಾದಗಿರಿ
ಒಟ್ಟು ಓದುಗರ ಸಂಖ್ಯೆ : 6+
ಯಾದಗಿರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪ ಗೌಡ ದರ್ಶನಾಪುರ ಅವರ ಅಧ್ಯಕ್ಷತೆಯಲ್ಲಿ ನಡೆಸಿ ಯಾದಗಿರಿ ಜಿಲ್ಲೆಯ ಶಹಾಪುರ ಸುರಪುರ ಗುರುಮಿಟ್ಕಲ್ ಯಾದಗಿರಿ ಹುಣಸಗಿ ಕ್ಷೇತ್ರದಲ್ಲಿ ಭಾರೀ ಮಳೆಯಿಂದ ಹಾಗೂ ತಾಲ್ಲೂಕುಗಳಲ್ಲಿ ಸಾಕಷ್ಟು ರೈತರ ಬೆಳೆಗಳು ಹಾನಿಯಾಗಿದ್ದು ಪ್ರತಿ ಗ್ರಾಮ ಮತ್ತು ಹೊಲಗಳಿಗೆ ಭೇಟಿ ನೀಡಿ ಸಮೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸುವ ಮೂಲಕ ಬೆಳೆನಷ್ಟದಿಂದ ನೊಂದಿರುವ ಎಲ್ಲ ರೈತರಿಗೆ ಪರಿಹಾರ ಕಲ್ಪಿಸಲು ಪ್ರಮಾಣಿಕವಾಗಿ ಪ್ರಯತ್ನಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು
ಸಭೆಯಲ್ಲಿ ಕೃಷಿ ಶಿಕ್ಷಣ ಗ್ರಾಮೀಣ ಕುಡಿಯುವ ನೀರು ಆರೋಗ್ಯ ತೋಟಗಾರಿಕೆ ಪಂಚಾಯತ ರಾಜ್ ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಜೆಸ್ಕಾಂ ಅರಣ್ಯ ರೇಷ್ಮೆ ಸಮಾಜ ಕಲ್ಯಾಣ ಡಿ ದೇವರಾಜ ಅರಸು ಇಲಾಖೆ ಇನ್ನಿತರ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಕುರಿತು ಸುಧೀರ್ಘವಾಗಿ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















