ವರದಿಗಾರರು :
ನಾಗೇಶ್, ||
ಸ್ಥಳ :
ಹಾಸನ
ವರದಿ ದಿನಾಂಕ :
29-10-2025
ಹಾಸನದಲ್ಲಿ ವಕೀಲರ ರಸ್ತೆ ತಡೆ ಪ್ರತಿಭಟನೆ
ಹಾಸನ : ಜಿಲ್ಲಾಧಿಕಾರಿಗಳು ವಕೀಲರ ಮನವಿಯನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ವಕೀಲರು ಇಂದು (ಅ.29) ಬೆಳಿಗ್ಗೆ 12 ಗಂಟೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ರಸ್ತೆ ತಡೆ ಪ್ರತಿಭಟನೆ ನಡೆಸಿದರು.
ನ್ಯಾಯಾಂಗದ ಕುರಿತು ಸ್ವಾಮೀಜಿಯೊಬ್ಬರು ಅವಾಚ್ಯ ಶಬ್ದಗಳಲ್ಲಿ ಮಾತನಾಡಿರುವುದಕ್ಕೆ ವಿರೋಧವಾಗಿ ವಕೀಲರು ಮನವಿ ನೀಡಲು ಆಗಮಿಸಿದ್ದರೂ, ಜಿಲ್ಲಾಧಿಕಾರಿಗಳು ತುರ್ತು ಸಭೆಯಲ್ಲಿದ್ದರಿಂದ ಮನವಿ ಸ್ವೀಕರಿಸಲು ಸಿಬ್ಬಂದಿ ಮಾತ್ರ ಹಾಜರಾಗಿದ್ದರು. ಆದರೆ ವಕೀಲರು ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬಂದು ಮನವಿಯನ್ನು ಸ್ವೀಕರಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯ ಪರಿಣಾಮವಾಗಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ರಸ್ತೆ ಮೇಲೆ ವಾಹನ ಸಂಚಾರ ಸ್ಥಗಿತಗೊಂಡಿದ್ದು, ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಪರ್ಯಾಯ ವ್ಯವಸ್ಥೆ ಕೈಗೊಳ್ಳುವಂತೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
