
ಲೈವ್ ಟಿವಿ ನ್ಯೂಸ್

ದಿನಾಂಕ : 22-03-2025
ಶತ್ರು ಸಂಹಾರ ಪೂಜೆಗೆ ಮುಂದಾದ್ರಾ ನಟ ದರ್ಶನ್!
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್
ವರದಿ ಸ್ಥಳ :ಬೆಂಗಳೂರು
ಒಟ್ಟು ಓದುಗರ ಸಂಖ್ಯೆ : 18180+
ಕೇರಳದ ಪ್ರಸಿದ್ಧ ಕಣ್ಣೂರಿನ ಮಡಾಯಿಕಾವು ಶ್ರೀಭಗವತೀ ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆಂದು ಹೇಳಲಾಗುತ್ತಿದೆ.
ಶತ್ರು ಸಂಹಾರ ಪೂಜೆಗೆ ಪ್ರಸಿದ್ಧವಾದ ಕೇರಳದ ದೇವಸ್ಥಾನ ಇದಾಗಿದೆ. ದೇವಾಲಯಕ್ಕೆ ಪತ್ನಿ ವಿಜಯಲಕ್ಷ್ಮಿ, ಪುತ್ರ, ಧನ್ವರ್ ಜೊತೆ ದೇವಸ್ಥಾನಕ್ಕೆ ನಟ ಭೇಟಿ ಭೇಟಿ ನೀಡಿದ್ದಾರೆ.
ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡಿಸಿ ನಟ ದೇವರ ದರ್ಶನ ಪಡೆದಿದ್ದಾರೆ. ಹಲವು ರಾಜಕಾರಣಿಗಳು ಈ ದೇವಸ್ಥಾನಕ್ಕೆ ಬಂದು ಶತ್ರು ಸಂಹಾರ ಪೂಜೆ ಮಾಡಿಸುತ್ತಾರೆ.
ಕೊಲೆ ಪ್ರಕರಣದಲ್ಲಿ ಜೈಲಿಂದ ಹೊರಬಂದ ಬಳಿಕ ನಟ ದರ್ಶನ್, ಡೆವಿಲ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಮೈಸೂರಿನಲ್ಲಿ ಈಗಾಗಲೇ ಚಿತ್ರೀಕರಣ ನಡೆಯುತ್ತಿದೆ.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















