ವರದಿಗಾರರು :
ನರೇಂದ್ರ ಬಾಬು ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
10-03-2025
ಜಲ್ಲಿಕಟ್ಟು ಸ್ಪರ್ಧೆ ವೇಳೆ ಗೂಳಿಗಳ ದಾಳಿ !
ಹೊಸೂರು: ಪ್ರತಿ ವರ್ಷದಂತೆ ಈ ಬಾರಿಯೂ ಆಯೋಜನೆ ಮಾಡಿದ್ದ ಜಲ್ಲಿಕಟ್ಟು ಸ್ಪರ್ಧೆ ವೇಳೆ ಭಾರೀ ಅವಘಡ ಸಂಭವಿಸಿದೆ. ಗೂಳಿಗಳು ಜಲ್ಲಿಕಟ್ಟು ಸ್ಪರ್ಧೆ ವೇಳೆ ಏಕಾಏಕಿ ದಾಳಿ ಮಾಡಿದ್ದು, ಇದರಿಂದ 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ . ಹಬ್ಬದ ಸಂಭ್ರಮದಲ್ಲಿದ್ದವರು ಈಗ ಆಸ್ಪತ್ರೆಯಲ್ಲಿ ನರಳಾಡುವ ಪರಿಸ್ಥಿತಿ ಬಂದಿದೆ. ಹೊಸೂರು ಬಳಿಯ ಮಲ್ಲಿಕಾರ್ಜುನ ದುರ್ಗಂ ಗ್ರಾಮದ ಬಳಿ ಈ ಘಟನೆ ನಡೆದಿದೆ.
ರಾಜ್ಯದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಪ್ರತಿ ವರ್ಷದಂತೆ ಈ ಬಾರಿಯೂ ಜಲ್ಲಿಕಟ್ಟು ಸ್ಪರ್ಧೆ ನಡೆಯುತ್ತಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 500 ಕ್ಕೂ ಅಧಿಕ ರಾಸುಗಳು ಭಾಗಿಯಾಗಿದ್ದವು.
