ವರದಿಗಾರರು :
ರಮೇಶ್ ಅಂಗಡಿ ||
ಸ್ಥಳ :
ಬಾಗಲಕೋಟೆ
ವರದಿ ದಿನಾಂಕ :
17-10-2025
ಇಳಕಲ್ ನಗರದ ಕಾಂಗ್ರೆಸ್ ಕಚೇರಿ ಎಸ್ ಆರ್ ಕೆ ನಿಲಯದಲ್ಲಿ 'ಮತ ಕಳ್ಳತನ ನಿಲ್ಲಿಸಿ' ಅಭಿಯಾನದ ಕುರಿತು ಸಭೆ
ಮಾನ್ಯರೇ, ಶುಕ್ರವಾರ ದಿನಾಂಕ:-17-10-2025 ಮಧ್ಯಾಹ್ನ:-03:00 ಗಂಟೆಗೆ ಇಳಕಲ್ ನಗರದ ಶಾಸಕರ ಗೃಹ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸೂಚನೆಯಂತೆ ದೇಶಾದ್ಯಂತ ನಡೆಯುತ್ತಿರುವ ಮತ ಕಳ್ಳತನದ (ವೋಟ್ ಚೋರಿ) ವಿರುದ್ಧ ಹೋರಾಟ ಅಭಿಯಾನದ ಭಾಗವಾಗಿ ಹುನಗುಂದ ಮತಕ್ಷೇತ್ರದಲ್ಲಿ ಸಹಿ ಸಂಗ್ರಹಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಇಳಕಲ್ ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಹುನಗುಂದ ಪುರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸರ್ವ ಸದಸ್ಯರು ಮತ್ತು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಬೂತ್ ಮಟ್ಟದ ಅಧ್ಯಕ್ಷರು ಸದಸ್ಯರು ಹಾಗೂ ಪಿಕೆಪಿಎಸ್ ಅಧ್ಯಕ್ಷರು ನಿರ್ದೇಶಕರು ಮತ್ತು ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ತಮ್ಮಲ್ಲಿ ವಿನಂತಿ. ಸುದ್ದಿ ಬಾಗಲಕೋಟ್ ಜಿಲ್ಲೆ ಇಲ್ಕಲ್ ತಾಲೂಕು*
