ವರದಿಗಾರರು :
ಫಯಾಜ್ ತೇಲಿ ||
ಸ್ಥಳ :
ಬಾಗಲಕೋಟೆ
ವರದಿ ದಿನಾಂಕ :
18-10-2025
ರಾಜ್ಯದಲ್ಲಿ ಗೃಹಲಕ್ಷ್ಮೀ ಹಣ ವಿಳಂಬ : ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು!
ರಾಜ್ಯ ಕಾಂಗ್ರೆಸ್ ಜಾರಿಗೆ ತಂದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ 2000 ಹಣವನ್ನ ಮಹಿಳೆಯರ ಖಾತೆಗೆ ಸರ್ಕಾರ ಜಮಾ ಮಾಡುತ್ತಿದೆ. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಐದು ತಿಂಗಳಿನಿಂದ ಪ್ರತಿ ತಿಂಗಳು ಮಹಿಳೆಯವರ ಖಾತೆಗೆ ಹಣ ಜಮಾ ಮಾಡುತ್ತಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದ್ದು,
ಇದೀಗ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಈಗಾಗಲೇ ದಸರಾ ಹಬ್ಬದ ಸಂದರ್ಭದಲ್ಲಿ ಒಂದು ಕಂತಿನ ಹಣ ಜಮಾವಾಗಿದ್ದು, ಇದೀಗ ದೀಪಾವಳಿ ಸಂದರ್ಭದಲ್ಲಿ ಯೋಜನೆಯ ಮತ್ತೊಂದು ಕಂತಿನ ಹಣ ಬಿಡುಗಡೆಯಾಗಲಿದೆ. ಹಬ್ಬಕ್ಕೆ 2000 ರೂ. ಫಲಾನುಭವಿ ಮಹಿಳೆಯರ ಖಾತೆ ಸೇರಲಿದೆ ಎಂದು ತಿಳಿಸಿದ್ದಾರೆ.
