ವರದಿಗಾರರು :
ಚೇತನ್ ರಾಜ್ ಟಿ ಎಸ್ ||
ಸ್ಥಳ :
ಹುಣಸೂರು
ವರದಿ ದಿನಾಂಕ :
12-11-2025
ಹುಣಸೂರು ಬಸ್ ನಿಲ್ದಾಣದಲ್ಲಿ ದ್ವಿಚಕ್ರ ವಾಹನ ನಿಲುಗಡೆ — ಸತ್ಯಪ್ಪ ಹೋರಾಟದ ಫಲ
ಹುಣಸೂರು: ಸಾಮಾಜಿಕ ಹೋರಾಟಗಾರ ಸತ್ಯಪ್ಪ ನೇತೃತ್ವದ ಸತ್ಯ ಎಂ ಎ ಎಸ್ ಫೌಂಡೇಶನ್ ಹೋರಾಟದ ಫಲವಾಗಿ, ಹುಣಸೂರು ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ದ್ವಿಚಕ್ರ ವಾಹನ ನಿಲುಗಡೆ ಪ್ರದೇಶ ಆರಂಭಗೊಂಡಿದೆ.
ಬಸ್ ನಿಲ್ದಾಣದ ಒಳಭಾಗದಲ್ಲಿ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆಯಿಲ್ಲದೇ ಜನ ಪರದಾಡುತ್ತಿದ್ದ ಹಿನ್ನೆಲೆಯಲ್ಲಿ, ಸಂಸ್ಥೆಯು ಹಲವು ಬಾರಿ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಿತ್ತು. ಬಳಿಕ ಆಗಸ್ಟ್ 1ರಂದು ನಡೆದ ಪ್ರತಿಭಟನೆ ನಂತರ ಕ್ರಮ ಕೈಗೊಳ್ಳಲಾಯಿತು.
ಈಗ ನೂತನವಾಗಿ ನಿರ್ಮಿಸಲಾದ ನಿಲುಗಡೆ ಪ್ರದೇಶದ ಜೊತೆಗೆ ಸಿಸಿ ಕ್ಯಾಮೆರಾ ಅಳವಡಿಕೆ ಮತ್ತು ಹೆಚ್ಚುವರಿ ಬಸ್ ಸೌಲಭ್ಯವೂ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಸತ್ಯಪ್ಪ ಅವರು ಮಾತನಾಡಿ, “ಸಾರ್ವಜನಿಕರು ತಮ್ಮ ವಾಹನಗಳನ್ನು ನಿಗದಿತ ನಿಲ್ದಾಣದಲ್ಲೇ ನಿಲ್ಲಿಸಿ ನಗರ ಸಂಚಾರ ವ್ಯವಸ್ಥೆಗೆ ಸಹಕರಿಸಬೇಕು. ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿರುವುದು ಶ್ಲಾಘನೀಯ,” ಎಂದು ಹೇಳಿದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
