ವರದಿಗಾರರು :
ಸಿದ್ದಾರ್ಥ ||
ಸ್ಥಳ :
ಹಾಸನ
ವರದಿ ದಿನಾಂಕ :
31-10-2025
ಮದುವೆ ವ್ಯಾನ್ ಬಿಸ್ಲೆ ಬಳಿ ಪತನ – ನಾಲ್ವರಿಗೆ ಗಂಭೀರ ಗಾಯ
ಸಕಲೇಶಪುರ ತಾಲ್ಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಮದುವೆ ಪಾರ್ಟಿಯ ವ್ಯಾನ್ ಬಿಸ್ಲೆ ಗಡಿಯಿಂದ ಸ್ವಲ್ಪ ಹಿಂದಿನ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ನಡೆದಿದೆ.
ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ವ್ಯಾನ್‌ನಲ್ಲಿ ಒಟ್ಟು 30 ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನವನ್ನು ಕ್ರೇನ್‌ನ ಸಹಾಯದಿಂದ ಮೇಲಕ್ಕೆ ಎತ್ತಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ.
ಸ್ಥಳೀಯರು ಸಹ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಗಾಯಾಳುಗಳನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
