ವರದಿಗಾರರು :
ದರ್ಶನ್ ಎಂ.ಎನ್ ||
ಸ್ಥಳ :
ದಾವಣಗೆರೆ
ವರದಿ ದಿನಾಂಕ :
23-12-2025
ಡ್ರಗ್ಸ್ ಕೇಸಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮವೆಂದ್ರು ಎಸ್ಪಿ ಉಮಾ ಪ್ರಶಾಂತ್..
ವಿದ್ಯಾನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಡ್ರಗ್ಸ್ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಮೂವರು ಪರಾರಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕೇಸ್ ದಾಖಲಿಸಲಾಗಿದೆ. ಈ ಕೇಸ್ ನಲ್ಲಿ 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 200 ಗ್ರಾಂ ಒಪಿಎಂ, 90 ಗ್ರಾಂ ಬ್ರೌನ್ ಶುಗರ್ ವಶಕ್ಕೆ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು.
ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ಮಾರಾಟ, ಸೇವನೆ ಕುರಿತಂತೆ ಜಾಗೃತಿ ಮೂಡಿಸಿದ್ದೇವೆ. ಈ ಬಗ್ಗೆ ಮಾಹಿತಿ ನೀಡುವಂತೆ ಜನರಲ್ಲಿಯೂ ಕೇಳಿಕೊಂಡಿದ್ದೇವೆ. ಜಾಗೃತಿ ಕಾರ್ಯಕ್ರಮಗಳಲ್ಲಿ ನಡೆಸಿದ್ದೇವೆ. ಡ್ರಗ್ಸ್ ಕೇಸ್ ನಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ. ಈ ಹಿಂದೆಯೂ ವೇದಮೂರ್ತಿ ವಿರುದ್ಧ ಇಂಥ ಆರೋಪಗಳು ಇರುವುದೂ ಸೇರಿದಂತೆ ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುವುದು ಎಂದು ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಾರೆ.
