ವರದಿಗಾರರು :
ನಾ.ಅಶ್ವಥ್ ಕುಮಾರ್ ||
ಸ್ಥಳ :
ಚಾಮರಾಜನಗರ
ವರದಿ ದಿನಾಂಕ :
12-11-2025
ಮಂಚಳ್ಳಿಯಲ್ಲಿ ಹುಲಿ ದಾಳಿ — ಎರಡು ಹಸುಗಳ ಬಲಿ, ಡ್ರೋನ್ ಶೋಧ ಕಾರ್ಯ ಆರಂಭ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಮಂಚಳ್ಳಿ ಗ್ರಾಮದಲ್ಲಿ ಹುಲಿ ದಾಳಿಯಿಂದ ಎರಡು ಹಸುಗಳು ಸಾವನ್ನಪ್ಪಿರುವ ಘಟನೆ ಆತಂಕ ಉಂಟುಮಾಡಿದ್ದು ಈ ಘಟನೆಯ ಬೆನ್ನಲ್ಲೇ ಅರಣ್ಯ ಇಲಾಖೆ ಹುಲಿಯನ್ನು ಪತ್ತೆಹಚ್ಚುವ ಕಾರ್ಯವನ್ನು ಡ್ರೋನ್ ಕ್ಯಾಮೆರಾ ಸಹಾಯದಿಂದ ಆರಂಭಿಸಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಂಚಳ್ಳಿ ಗ್ರಾಮದ ಹೊರವಲಯದಲ್ಲಿ ಶಿವಣ್ಣಎಂಬುವವರಿಗೆ ಸೇರಿದ ಎರಡು ಹಸುಗಳು ಮೇಯುತ್ತಿರುವ ವೇಳೆ ಹುಲಿ ಏಕಾಏಕಿ ದಾಳಿ ನಡೆಸಿ ಕೊಂದಿದೆ. ಈ ಘಟನೆ ಬಳಿಕ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.
ಅರಣ್ಯ ಇಲಾಖೆಯ ಶಶಿಕುಮಾರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ಡ್ರೋನ್ ಕ್ಯಾಮೆರಾ ಮೂಲಕ ಹುಲಿಯ ಚಲನವಲನವನ್ನು ಪತ್ತೆಹಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
