
ಲೈವ್ ಟಿವಿ ನ್ಯೂಸ್

ದಿನಾಂಕ : 18-09-2025
ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ
ವರದಿಗಾರರು : ಸಾತಪ್ಪ ,
ವರದಿ ಸ್ಥಳ :ಧಾರವಾಡ
ಒಟ್ಟು ಓದುಗರ ಸಂಖ್ಯೆ : 17+
ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ದೇಶದ ಹೆಮ್ಮೆಯ ಪ್ರಧಾನಿ ಶ್ರೀನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು, ಸ್ವಸ್ಥ ನಾರಿ ಸ್ವಶಕ್ತ ಪರಿವಾರ ಅಭಿಯಾನ ದಡಿ ‘ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ‘ ಪಲಾನುಭವಿ ತಾಯಂದರಿಗೆ ಸಹಾಯ ಧನ ಜಮೆ ಹಾಗೂ ಆರೋಗ್ಯ ತಪಾಸಣೆ, ಯುವಕ-ಯುವತಿಯರಿಂದ ರಕ್ತದಾನ ಶಿಬಿರ,
ದಿವ್ಯಾಂಗರಿಗೆ (ಅಂಗವಿಕಲರಿಗೆ) ಹಾಗೂ ಹಿರಿಯ ನಾಗರಿಕರಿಗೆ ಉಚಿತವಾಗಿ ಸಹಾಯಕ ಸಾಧನ ಮತ್ತು ಉಪಕರಣಗಳ ವಿತರಣಾ ಕಾರ್ಯಕ್ರಮ. ಪೌರ ಕಾರ್ಮಿಕರಿಗೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯ ನಡೆಯಿತು, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಯತೀರ್ಥ ಕಟ್ಟಿ,ಜಿಲ್ಲಾ ಹಾಗು ತಾಲೂಕು ಬಿಜೆಪಿ ಪದಾಧಿಕಾರಿಗಳು, ವಿವಿದ ಇಲಾಖೆಗಳ ಅಧಿಕಾರಿಗಳು ಹಾಗು ಸಿಬ್ಬಂದಿಗಳು, ತಾಲೂಕು ಆಸ್ಪತ್ರೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆರು, ಪಕ್ಷದ ಅಭಿಮಾನಿಗಳು, ವಿವಿದ ಫಲಾನುಭವಿಗಳು,ಉಪಸ್ಥಿತರಿದ್ದರು.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















