ವರದಿಗಾರರು :
ಡಾ. ಜ್ಯೋತಿ, ||
ಸ್ಥಳ :
ತುಮಕೂರು
ವರದಿ ದಿನಾಂಕ :
27-10-2025
ಸಾರಿಗೆ ಬಸ್ಸುಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯಲು ನಿಷೇಧ
ಆಂಧ್ರಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ನಲ್ಲಿ ಬೆಂಕಿ ಹತ್ತಿ 20 ಮಂದಿ ಸಜೀವ ದಹನವಾದ ದುರಂತ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಸಾರಿಗೆ ಬಸ್ಸುಗಳಲ್ಲಿ ಬೆಂಕಿ ಹತ್ತಿಕೊಳ್ಳುವ ಅಥವಾ ಸ್ಪೋಟಕ ವಸ್ತುಗಳನ್ನು ಸಾಗಿಸುವುದನ್ನು ನಿಷೇಧಿಸಲಾಗಿದೆ, ಎಲ್ಲಾ ಎಸಿ ಬಸ್ ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಹೊಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು ಮತ್ತು ಲಗೇಜ್ ಜಾಗದ್ದಲ್ಲಿ ಯಾರು ಮಲಗುವಂತಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಆದೇಶಿಸಿದ್ದಾರೆ
