ವರದಿಗಾರರು :
ಬಸವರಾಜ ಪೂಜಾರಿ ||
ಸ್ಥಳ :
ಬೀದರ್
ವರದಿ ದಿನಾಂಕ :
03-11-2025
ಜನ್ಮದಿನದ ನಿಮಿತ್ತ ಹೆಲ್ಮೆಟ್ ಉಚಿತ ವಿತರಣೆ ಮತ್ತು ರಕ್ತದಾನ ಶಿಬಿರ
ಬೀದರ್: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಹಾಗೂ ಯುವ ಕ್ರಾಂತಿ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಗುಂಡುರೆಡ್ಡಿ ಅವರ ಜನ್ಮದಿನದ ನಿಮಿತ್ತ ಯುವ ಕ್ರಾಂತಿ ಸಂಘಟನೆ ವತಿಯಿಂದ ಹೆಲ್ಮೆಟ್ ಉಚಿತ ವಿತರಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಹುಮನಾಬಾದ್ ಪಟ್ಟಣದ ಸಿಪಿಐ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಬೈಕ್ ಸವಾರರಿಗೆ ಹೆಲ್ಮೆಟ್‌ಗಳನ್ನು ಉಚಿತವಾಗಿ ವಿತರಿಸಲಾಯಿತು. ಅದೇ ರೀತಿಯಲ್ಲಿ ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿ ಗ್ರಾಮದಲ್ಲಿ ನಡೆದ ಶಿಬಿರದಲ್ಲಿ 47 ಮಂದಿ ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಯುವ ಕ್ರಾಂತಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಭೂರೆ, ಪ್ರಮುಖರಾದ ಮಲ್ಲಿಕನಾಥ ಮಡಗೆ, ರಾಜು ದುಬಲಗುಂಡಿ, ಪರಮೇಶ್, ಪಪ್ಪುರಾಜ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
