ವರದಿಗಾರರು :
ತೌಕೀರ್ ಖತೀಬ್ ||
ಸ್ಥಳ :
ಬೆಳಗಾವಿ
ವರದಿ ದಿನಾಂಕ :
19-10-2025
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಲಕ್ಷ್ಮಣ ಸವದಿ ಮತಯಾಚನೆ
ಬೆಳಗಾವಿ ಜಿಲ್ಲೆ: ಅಥಣಿ ಕ್ಷೇತ್ರದ ಶಾಸಕರು ಹಾಗೂ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಅವರು ಇಂದು ಡಿಸಿಸಿ ಬ್ಯಾಂಕ್ ಚುನಾವಣೆಯ ಹಿನ್ನೆಲೆ ಮತಯಾಚನೆ ನಡೆಸಿದರು.
ಈ ವೇಳೆ ಅವರು ಕಿತ್ತೂರಿನ ಮಾಜಿ ಶಾಸಕರಾದ ಮಾಂತೇಶ ದೊಡ್ಡಗೌಡ್ರು ಅವರನ್ನು ಆತ್ಮೀಯ ಸ್ನೇಹಿತರೆಂದು ಹೇಳಿ, “ಇವತ್ತು ಆಲೆ, ನಾಳೆ ಆಲೆ — ನನ್ನ ಪರವಾಗಿ ಇರ್ತಾನೆ” ಎಂದು ಭರವಸೆ ವ್ಯಕ್ತಪಡಿಸಿದರು.
ಮುಂದುವರಿಸಿ ಮಾತನಾಡಿದ ಅವರು, “ಡಿಸೆಂಬರ್‌ನಲ್ಲಿ ಕ್ರಾಂತಿ ಆಗಲಿದೆ. ನನ್ನ ಹೈಕಮಾಂಡ್, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಅಧ್ಯಕ್ಷರು ನಮಗೆ ಒಳ್ಳೆಯ ಭವಿಷ್ಯವಿದೆ ಎಂದು ಹೇಳಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
