
ಲೈವ್ ಟಿವಿ ನ್ಯೂಸ್

ದಿನಾಂಕ : 02-05-2025
‘ಕಾಲನಾಗಿಣಿ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್
ವರದಿ ಸ್ಥಳ :ಬೆಂಗಳೂರು
ಒಟ್ಟು ಓದುಗರ ಸಂಖ್ಯೆ : 309+
ಸ್ಯಾಂಡಲ್‌ವುಡ್ ಚಿಟ್ಟೆ ಹರ್ಷಿಕಾ ಪೂಣಚ್ಚ ಕಾಲನಾಗಿಣಿಯಾಗಿ ಮಿಂಚಲು ರೆಡಿಯಾಗಿದ್ದಾರೆ. ಇದೀಗ ಹರ್ಷಿಕಾ ಪಾತ್ರದ ಪೋಸ್ಟರ್ ಅನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.
ಮೇ 1ರಂದು ಹರ್ಷಿಕಾ ಪೂಣಚ್ಚ ಹುಟ್ಟುಹಬ್ಬದ ಹಿನ್ನೆಲೆ ‘ಕಾಲನಾಗಿಣಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಬೆಂಬಲಿಸಿದ್ದಾರೆ.
‘ಕಾಲನಾಗಿಣಿ’ ಸಿನಿಮಾದಲ್ಲಿ ನಾಗಿಣಿ ಮತ್ತು ರಾಣಿ ಎರಡು ರೀತಿಯ ಶೇಡ್‌ನಲ್ಲಿ ಹರ್ಷಿಕಾ ನಟಿಸಲಿದ್ದಾರೆ. ಈ ಸಿನಿಮಾಗೆ ವಿಶ್ರುತ್ ನಾಯಕ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಮಧುರಾ ಮೂವೀಸ್ ಬ್ಯಾನರ್ ಅಡಿ ಈ ಚಿತ್ರ ನಿರ್ಮಾಣ ಆಗ್ತಿದೆ.
ಹರ್ಷಿಕಾ ಜೊತೆ ಅರ್ಜುನ್ ವೇದಾಂತ್, ಅವಿನಾಶ್, ಶರತ್ ಲೋಹಿತಾಶ್ವ, ಉಗ್ರಂ ಮಂಜು, ವಿಜಯ್ ಚೆಂಡೂರ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















