ವರದಿಗಾರರು :
ನಜ್ರುಲ್ಲಾ ಬೇಗ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
26-10-2025
ಜೆಡಿಎಸ್ ನಿಂದ 5 ನಗರ ಪಾಲಿಕೆ ಚುನಾವಣೆಗಳಿಗೆ ಉಸ್ತುವಾರಿ ಸಮಿತಿ ರಚನೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾಗಿರುವ ಐದು ನಗರ ಪಾಲಿಕೆಗಳ ಮುಂಬರುವ ಚುನಾವಣೆಗಳ ಸಿದ್ಧತೆಗಾಗಿ ಜೆಡಿಎಸ್ ಪಕ್ಷವು ಉನ್ನತ ಮಟ್ಟದ ಉಸ್ತುವಾರಿ ಸಮಿತಿಯನ್ನು ರಚಿಸಿದೆ. ಪಕ್ಷದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಶನಿವಾರ ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದು ಶಾಸಕರಾದ ಟಿಎ ಶರವಣ ಸೇರಿದಂತೆ ಒಂಬತ್ತು ಮಂದಿ ಹಿರಿಯ ಮುಖಂಡರನ್ನು ಈ ಸಮಿತಿಗೆ ನೇಮಿಸಲಾಗಿದೆ.. ಫೆಬ್ರವರಿ ಮತ್ತು ಮಾರ್ಚ್ 2026 ರಲ್ಲಿ ನಡೆಯುವ ಸಂಭವ ಇರುವ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಒತ್ತು ನೀಡುವ ಈ ನಿರ್ಣಯ ಕೈಗೊಳ್ಳಲಾಗಿದೆ
