ವರದಿಗಾರರು :
ದರ್ಶನ್ ಎಂ.ಎನ್, ||
ಸ್ಥಳ :
ದಾವಣಗೆರೆ
ವರದಿ ದಿನಾಂಕ :
13-11-2025
ನರೇಗಾ ಕಾರ್ಮಿಕ ದುರ್ಘಟನೆ: ಸ್ಥಳದಲ್ಲೇ ಸಾವು
ಹೊನ್ನಾಳಿ ತಾಲ್ಲೂಕಿನ ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ನಡೆಯುತ್ತಿದ್ದ ಕಂದಕ ನಿರ್ಮಾಣ ಕೆಲಸದಲ್ಲಿ 61 ವರ್ಷದ ಜಿಕ್ರಿಯಾ ಸಬಾದ್ (ಜಾಬ್ ಕಾರ್ಡ್ ನಂ: ಕೆಎನ್-12-005-037-004/396) ಹಠಾತ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಅವರು ಕಾಮಗಾರಿ ಸ್ಥಳಗಳಲ್ಲಿ ಆರೋಗ್ಯ ತಪಾಸಣೆ ಮತ್ತು ಸುರಕ್ಷತೆ ನಿಯಮಿತವಾಗಿರಬೇಕೆಂಬ ಮಹತ್ವವನ್ನು ಒತ್ತಿ ಹೇಳಿದರು.
ಮೃತರ ಕುಟುಂಬಕ್ಕೆ ಸಾಂತ್ವನ ನೀಡಲಾಯಿತು ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳು ಮತ್ತು ಸಹಾಯವನ್ನು ತ್ವರಿತವಾಗಿ ಒದಗಿಸುವ ಭರವಸೆ ನೀಡಲಾಯಿತು. ಸ್ಥಳದಲ್ಲಿ ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹೊನ್ನಾಳಿ ವಲಯ ಅರಣ್ಯ ಅಧಿಕಾರಿ ಮತ್ತು ಹಿರೇಗೋಣಿಗೆರೆ ಗ್ರಾಮ ಪಂಚಾಯತ್ ಪಿಡಿಓ ಉಪಸ್ಥಿತರಿದ್ದರು.
