ವರದಿಗಾರರು :
ಎಂ. ಬಸವರಾಜ್, ||
ಸ್ಥಳ :
ವಿಜಯನಗರ
ವರದಿ ದಿನಾಂಕ :
19-10-2025
ಜನಪರ ಆಡಳಿತ: ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರ್ಕಾರ
ನಿಂಬಳಗೆರೆ, ಅ.18: “ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರ್ಕಾರ – ಯೋಚನೆಯನ್ನು ಯೋಜನೆಯನ್ನಾಗಿ ಬದಲಿಸುವುದೇ ಅಭಿವೃದ್ಧಿ” ಎಂಬ ಧ್ಯೇಯವಾಕ್ಯದಡಿ ಜನಪರ ಆಡಳಿತದ ಮಾದರಿಯಾಗಿರುವ ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರ್ಕಾರ ಕಾರ್ಯಕ್ರಮವನ್ನು ನಿಂಬಳಗೆರೆ ಗ್ರಾಮ ಪಂಚಾಯತಿಯಲ್ಲಿ ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ. ರವರು ಉದ್ಘಾಟಿಸಿದರು.
ತಾಲೂಕು ಮಟ್ಟದ ಆಡಳಿತ ಕಚೇರಿಗಳಿಗೆ ಮಾತ್ರ ಸೀಮಿತವಾಗದೆ, ಸರ್ಕಾರವನ್ನು ಜನರ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಮುಂದೆ ಮಂಡಿಸಿ ತಕ್ಷಣದ ಪರಿಹಾರ ಕಂಡುಕೊಳ್ಳುವಂತಾದುದು ಇದರ ವಿಶೇಷತೆ.
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲಾದ ಕೂಡ್ಲಿಗಿ ವಿಧಾನಸಭಾ ಕ್ಷೇತ್ರವು ಹಿಂದುಳಿದ ಪ್ರದೇಶವಾಗಿದ್ದು, ಈ ಹಣೆಪಟ್ಟಿಯನ್ನು ಕಳಚಲು ಶಾಸಕರು ಸತತ ಪ್ರಯತ್ನ ನಡೆಸುತ್ತಿದ್ದಾರೆ. ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅನುದಾನವನ್ನು ತಂದು ಕ್ಷೇತ್ರದ ಪ್ರಗತಿಗೆ ಹೊಸ ದಿಕ್ಕು ನೀಡುತ್ತಿರುವುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಕೊಟ್ಟೂರು ತಹಶೀಲ್ದಾರರಾದ ಅಮರೇಶ್ ಜಿ.ಕೆ, ತಾಲ್ಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಎಸ್. ಶ್ರೀಕಾಂತ್, ಉಪಾಧ್ಯಕ್ಷೆ ಮಂಗಳಮ್ಮ ವೆಂಕಟೇಶ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಶಶಿಧರ ಸ್ವಾಮಿ, ನಾಗರಕಟ್ಟೆ ರಾಜಣ್ಣ, ಹಾಗೂ ಸ್ಥಳೀಯ ಮುಖಂಡರು, ಮಹಿಳೆಯರು, ಯುವಕರು, ಹಿರಿಯ ನಾಗರಿಕರು, ಸಾರ್ವಜನಿಕರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
