
ಲೈವ್ ಟಿವಿ ನ್ಯೂಸ್

ದಿನಾಂಕ : 05-08-2025
ಯಲ್ಲಾಪುರ ತಾಲೂಕಿನ ವಿವಿಧ ಕಡೆ ಜಿಲ್ಲಾ ಪಂಚಾಯತ್ ಸಿ.ಈ.ಓ ಬೇಟಿ
ವರದಿಗಾರರು : ಹರೀಶ್ ಜೋಗಿ
ವರದಿ ಸ್ಥಳ :ಯಲ್ಲಾಪುರ
ಒಟ್ಟು ಓದುಗರ ಸಂಖ್ಯೆ : 70+
ಯಲ್ಲಾಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಅವರು ಮಂಗಳವಾರ ಭೇಟಿ ನೀಡಿ ಜಲ್ ಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಳಿಸಲಾದ ಕಾಮಗಾರಿಗಳನ್ನು ಪರಿಶೀಲಿಸಿದರು.
ಗ್ರಾಮೀಣ ಮಟ್ಟದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಪಡೆದಿರುವ ಎಲ್ಲ ಮನೆಗಳಿಗೆ ವಾರ್ಷಿಕವಾಗಿ ಏಕರೂಪ ಕರ ಸಂಗ್ರಹಿಸುವ ಬದಲು ನೀರಿನ ಬಳಸುವಿಕೆಗೆ ತಕ್ಕಂತೆ ಮೀಟರ್ ರೀಡಿಂಗ್ ಆಧಾರದ ಮೇಲೆ ಕರ ಸಂಗ್ರಹಿಸುವಂತೆ ಉತ್ತರ ಕನ್ನಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಳ್ಳಿ ಗ್ರಾಮದ ಹದ್ದಿನಸರ ಮಜರೆ, ತೊಟ್ಟಿಲಗುಂಡಿ ಮಜರೆ, ಕಂಚನಳ್ಳಿ ಗ್ರಾಮದ ಸಣ್ಣಯಲಹಳ್ಳಿ ಮಜರೆ, ಕಿರವತ್ತಿ, ಗ್ರೀನ್ ಸರ್ಕಲ್ ಮಜರೆ, ಕಣ್ಣಿಗೇರಿ ಪಂಚಾಯತ್ ವ್ಯಾಪ್ತಿಯ ಕನ್ನಡಗಲ್ ಗ್ರಾಮದ ಹಿಟ್ಟಿನಬೈಲ್ ಮಜರೆ, ಚಂದುಗುಳಿ ಪಂಚಾಯತ್ ವ್ಯಾಪ್ತಿಯ ಉಪಳೇಶ್ವರ ಮಜರೆ, ಇಡಗುಂದಿ ಪಂಚಾಯತ್ ವ್ಯಾಪ್ತಿಯ ಗುಳ್ಳಾಪುರ ಗ್ರಾಮದ ರಾಮನಗರ ಮಜರೆಗಳಲ್ಲಿ ಜೆಜೆಎಮ್ ಯೋಜನೆಯಡಿ ಸಂಪರ್ಕ ಪಡೆದ ಮನೆ ಮತ್ತು ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ನೀರಿನ ಪೂರೈಕೆ, ಶುದ್ಧತೆ ಮತ್ತು ಉಪಯೋಗದ ಕುರಿತು ಫಲಾನುಭವಿಗಳಿಂದ ಮಾಹಿತಿ ಪಡೆದರು.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















