ವರದಿಗಾರರು :
ಎಚ್ ಎಮ್ ಹವಾಲ್ದಾರ ||
ಸ್ಥಳ :
ಯಾದಗಿರಿ
ವರದಿ ದಿನಾಂಕ :
18-11-2025
ಸುರಪುರದ ನರಸಿಂಹಕಾಂತ ಪಂಚಮಗಿರಿ ಅವರಿಗೆ ರಾಜ್ಯಮಟ್ಟದ ‘ಕರುನಾಡ ರತ್ನ’ ಪ್ರಶಸ್ತಿ
ಸುರಪುರ: ಪಟ್ಟಣದ ವಾರ್ಡ್ 8ರ ನಗರಸಭೆ ಸದಸ್ಯ ನರಸಿಂಹಕಾಂತ ಪಂಚಮಗಿರಿ ಅವರಿಗೆ 2024–25ರ ರಾಜ್ಯಮಟ್ಟದ ಕರುನಾಡ ರತ್ನ ಪ್ರಶಸ್ತಿ ಲಭಿಸಿದೆ. ಸಾಮಾಜಿಕ ಸೇವೆಯಲ್ಲಿ ನೀಡಿರುವ ಶ್ರೇಷ್ಠ ಕೊಡುಗೆ, ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ, ಬಡವರಿಗೆ ಆಶ್ರಯ ಮನೆಗಳ ನಿರ್ಮಾಣ ಸಹಾಯ, ಬೀದಿ ವ್ಯಾಪಾರಿಗಳಿಗೆ ಸರ್ಕಾರಿ ಸೌಲಭ್ಯ ಒದಗಿಸುವಂತಹ ಕಾರ್ಯಗಳಿಗಾಗಿ ಈ ಗೌರವ ನೀಡಲಾಗಿದೆ.
ಬೆಂಗಳೂರಿನ ಕಲಾಗ್ರಾಮ ಸಭಾಂಗಣದಲ್ಲಿ ಕರ್ನಾಟಕ ಸಂಸ್ಕೃತಿಕ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ, ಆದಿ ಚುಂಚನಗಿರಿ ಮಹಾಸಂಸ್ಥಾನದ ಸೌಮ್ಯನಾಥ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ನಾಡೋಜ ಡಾ. ಮನು ಬಳಿಗಾರ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನವಾಯಿತು.
ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಪಂಚಮಗಿರಿ, “ಈ ಗೌರವ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮುಂದುವರೆಯುವ ದಿನಗಳಲ್ಲಿ ದೀನ–ದಲಿತರ ಹಾಗೂ ಬಡವರ ಪರ ಹೋರಾಟವನ್ನು ಇನ್ನಷ್ಟು ಬಲಪಡಿಸುತ್ತೇನೆ,” ಎಂದು ಹೇಳಿದರು.
ಅವರ ಸ್ನೇಹಿತರಾದ ಜಿತೇಂದ್ರ ಸಿಂಗ್ ಠಾಕೂರ್, ಈಶ್ವರ್ ನಾಯಕ್, ರಾಜೇಶ್ ಜೋಶಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
