ವರದಿಗಾರರು :
ನಾಗೇಶ್ ಕೆ ಜೆ ||
ಸ್ಥಳ :
ಹಾಸನ
ವರದಿ ದಿನಾಂಕ :
28-11-2025
ಹಾಸನದಲ್ಲಿ ಪೂರ್ವಭಾವಿ ಅಧಿಕಾರಿಗಳ ಸಭೆ
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೃಷ್ಣ ಬೈರೇಗೌಡರು ಹೊಯ್ಸಳ ಸಭಾಂಗಣದಲ್ಲಿ ಇಂದು ಒಂದು ಅಧಿಕಾರಿಗಳ ಸಭೆಯನ್ನು ನಡೆಸಿದರು. ಈ ಸಭೆ ಹಾಸನ ಜಿಲ್ಲೆಗೆ ಸಂಬಂಧಿಸಿದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರ ಡಿಸೆಂಬರ್ 6ರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರೆದಿತ್ತು.
ಸಭೆಯಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ, ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಎಂ ಶಿವಲಿಂಗೇಗೌಡ, ಹಾಗೂ ಸಂಸದ ಶ್ರೇಯಸ್ ಪಟೇಲ್ರವರು ಹಾಜರಾಗಿದ್ದರು. ಸಭೆಯ ಉದ್ದೇಶವು ಮುಖ್ಯಮಂತ್ರಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಪೂರ್ವ ಸಿದ್ಧತೆಗಳನ್ನು ಪರಿಶೀಲಿಸುವುದು ಮತ್ತು ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಮನಗಂಡು ಕಾರ್ಯಕ್ರಮಕ್ಕಾಗಿ ಸಮರ್ಪಕ ವ್ಯವಸ್ಥೆ ಮಾಡಲು ನಿರ್ದೇಶನ ನೀಡುವದು
