ವರದಿಗಾರರು :
ಕೊಟ್ರೇಶ್ H ||
ಸ್ಥಳ :
ಚಿತ್ರದುರ್ಗ
ವರದಿ ದಿನಾಂಕ :
15-11-2025
“ವಿಷಪ್ರಸಾದ ಪ್ರಕರಣ: ಆರೋಪಿಗೆ ಜಾಮೀನು — ಕೊಳ್ಳೇಗಾಲದಲ್ಲಿ ಆಕ್ರೋಶ ಜ್ವಾಲೆ”
ಚಾಮರಾಜನಗರ: ಸುಳ್ವಾಡಿ ಕಿಚ್ಚಕಿಟ್ಟು ಮಾರಮ್ಮ ದೇವಸ್ಥಾನದಲ್ಲಿ ನಡೆದ ವಿಷಪ್ರಸಾದ ದುರಂತದ ಮುಖ್ಯ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಹೈಕೋರ್ಟ್ ಜಾಮೀನು ಮಂಜೂರಾದ ಹಿನ್ನೆಲೆ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕೊಳ್ಳೇಗಾಲ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಯ ಬಳಿ ಪೆದ್ದನಪಾಳ್ಯದ ಮಣಿ ನೇತೃತ್ವದಲ್ಲಿ ಸಂತ್ರಸ್ತರು ಜಮಾಯಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಮಣಿ, “ವಿಷಪ್ರಸಾದ ಪ್ರಕರಣದ ಮೊದಲನೇ ಆರೋಪಿ ಜಾಮೀನಿನಲ್ಲಿರುವುದು ಸಂತ್ರಸ್ತರು ಮತ್ತು ಮೃತರ ಕುಟುಂಬಗಳಿಗೆ ಮತ್ತೊಂದು ಮಾನಸಿಕ ಪೆಟ್ಟು. ಆರೋಪಿ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಪ್ರಭಾವಿ ಆದ್ದರಿಂದ ಸಾಕ್ಷಿದಾರರ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ. ಹೀಗಾಗಿ ಜಾಮೀನನ್ನು ತಕ್ಷಣವೇ ರದ್ದುಪಡಿಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಿ ಆರೋಪಿಗಳಿಗೆ ಕಟ್ಟುನಿಟ್ಟಿನ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
