
ಲೈವ್ ಟಿವಿ ನ್ಯೂಸ್

ದಿನಾಂಕ : 15-09-2025
ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾಕ್ಕೆ ಚಾಲನೆ
ವರದಿಗಾರರು : ಹೆಚ್ ಎಂ ಹವಾಲ್ದಾರ್
ವರದಿ ಸ್ಥಳ :ಬಾಗಲಕೋಟೆ
ಒಟ್ಟು ಓದುಗರ ಸಂಖ್ಯೆ : 5+
ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸೈಕಲ್ ಜಾಥಾಕ್ಕೆ ಬಾಗಲಕೋಟೆ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎನ್.ವಿ.ವಿಜಯ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು ಜಂಟಿಯಾಗಿ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿ.ಪಂ,ಸಮಾಜ ಕಲ್ಯಾಣ ಇಲಾಖೆ,ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಸೈಕಲ್ ಜಾಥಾ ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆಯ ಮೈದಾನದಿಂದ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಡಳಿತಭವನಕ್ಕೆ ಬಂದು ತಲುಪಿ ಸಮಾರೋಪಗೊಂಡಿತು. ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಓ ಶಶಿಧರಕುರೇರ, ಎಸ್ಪಿ ಅಮರನಾಥರೆಡ್ಡಿ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















