ವರದಿಗಾರರು :
ನಾಗೇಶ್ ||
ಸ್ಥಳ :
ಹಾಸನ
ವರದಿ ದಿನಾಂಕ :
01-11-2025
ಹಾಸನದಲ್ಲಿ ಕಾಂಗ್ರೆಸ್‌ನ “ವೋಟ್ ಚೋರಿ” ಸಹಿ ಸಂಗ್ರಹ ಅಭಿಯಾನ ಆರಂಭ
ಹಾಸನ: ನಗರದ ಹೇಮಾವತಿ ಪ್ರತಿಮೆಯ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ “ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಆಂದೋಲನ” ಕಾರ್ಯಕ್ರಮವನ್ನು ಶನಿವಾರ ಭರ್ಜರಿಯಾಗಿ ಆರಂಭಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್, ಹಿರಿಯ ಕಾಂಗ್ರೆಸ್ ಮುಖಂಡ ಬನವಾಸಿ ರಂಗಸ್ವಾಮಿ, ವಕೀಲ ದೇವರಾಜ ಗೌಡ, ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಲಕ್ಷ್ಮಿ ರಾಜನ್ ಗೌಡ, ಲಲ್ತಮ್ಮ ಸೇರಿದಂತೆ ಅನೇಕ ನಾಯಕರು, ಕಾರ್ಯಕರ್ತರು ಹಾಗೂ ಎಲ್ಲಾ ಬೂತ್ ಸಮಿತಿಯ ಸದಸ್ಯರು ಭಾಗವಹಿಸಿದರು.
ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸಂಪಂಗಿ ಅವರು ಚಾಲನೆ ನೀಡಿ ಮಾತನಾಡಿದರು. ಅವರು “ಪ್ರತಿ ಬೂತ್‌ನಲ್ಲಿ ವೋಟ್ ಕಳ್ಳತನದ ಘಟನೆಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವ ಮತ್ತು ಜನರ ಅಭಿಪ್ರಾಯವನ್ನು ಸರ್ಕಾರದ ಮುಂದೆ ತರುವ ಉದ್ದೇಶದಿಂದ ಈ ಅಭಿಯಾನ ನಡೆಸಲಾಗುತ್ತಿದೆ. ಹೈಕಮಾಂಡ್ ಸೂಚನೆಯಂತೆ ಎಲ್ಲಾ ಕ್ಷೇತ್ರಗಳಲ್ಲಿ ಈ ಅಭಿಯಾನ ಯಶಸ್ವಿಯಾಗಿ ನಡೆಯಬೇಕು” ಎಂದು ಹೇಳಿದರು. ಜಿಲ್ಲಾಧ್ಯಕ್ಷ ಲಕ್ಷ್ಮಣ್ ಅವರು “ಕಾರ್ಯಕರ್ತರು ತಳಮಟ್ಟದಲ್ಲಿ ಕೆಲಸ ಮಾಡಿ ಪ್ರಜಾಸತ್ತಾತ್ಮಕ ಹಕ್ಕು ರಕ್ಷಣೆಗಾಗಿ ಶ್ರಮಿಸಬೇಕು” ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಅನೇಕ ಕಾಂಗ್ರೆಸ್ ಮುಖಂಡರು ಮಾತನಾಡಿ, ವೋಟ್ ಕಳ್ಳತನದ ಘಟನೆಗಳನ್ನು ಸಾರ್ವಜನಿಕವಾಗಿ ಬಯಲಿಗೆಳೆಯುವ ಕುರಿತು ಚರ್ಚಿಸಿದರು.
