ವರದಿಗಾರರು :
ದರ್ಶನ್ ಎಂ.ಎನ್ ||
ಸ್ಥಳ :
ದಾವಣಗೆರೆ
ವರದಿ ದಿನಾಂಕ :
08-11-2025
ಸೂಳೆಕೆರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ–ಮಗಳನ್ನು ಹೊಯ್ಸಳ ಪೊಲೀಸರು ರಕ್ಷಿಸಿದರು
ಚನ್ನಗಿರಿ ತಾಲೂಕಿನ ನಲ್ಲೂರಿನ ಮಹಿಳೆ ಹಾಗೂ ಆಕೆಯ ಮಗಳು ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚನ್ನಗಿರಿ ತಾಲೂಕಿನ ಶಾಂತಿಸಾಗರ (ಸೂಳೆಕೆರೆ)ಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿ–ಮಗಳನ್ನು ಅಲ್ಲಿಯೇ ಕರ್ತವ್ಯದಲ್ಲಿದ್ದ ಗೃಹರಕ್ಷಕ ಸಿಬ್ಬಂದಿ ಪುನೀತ್ ಅವರು ಗಮನಿಸಿ ತಕ್ಷಣ ತುರ್ತು ಸಹಾಯ ವಾಣಿ 112 ಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ.
ಅನಂತರ 112ರ ಹೊಯ್ಸಳ ವಾಹನದ ಕರ್ತವ್ಯದಲ್ಲಿದ್ದ ಎಎಸ್ಐ ದೇವೇಂದ್ರಪ್ಪ ಹಾಗೂ ಚಾಲಕ ಸೈಯದ್ ಅಲಿ ಅವರು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮತ್ತು ಮಗಳನ್ನು ರಕ್ಷಿಸಿದ್ದಾರೆ. ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಪೊಲೀಸರಿಂದ ಸಾಂತ್ವನ ಹೇಳಿ ವಿಚಾರಣೆ ನಡೆಸಲಾಗಿದೆ.
ಘಟನೆಯ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಮಹಿಳೆಯ ಮನೆಯವರನ್ನು ಸಂಪರ್ಕಿಸಿ ಸೂಕ್ತ ಬುದ್ಧಿವಾದ ನೀಡಿ ಕುಟುಂಬದೊಂದಿಗೆ ಕಳುಹಿಸಲಾಗಿದೆ.
“ಯಾವುದೇ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ ಸಹಾಯ ಪಡೆಯಿರಿ,” ಎಂದು ಪೊಲೀಸರು ಜನತೆಗೆ ಮನವಿ ಮಾಡಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
