ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
21-10-2025
ಜುಬಿಲಿ ಹಿಲ್ಸ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಖಾಲಿದ್ ಅಹ್ಮದ್ ಮತಯಾಚನೆ
ಹೈದರಾಬಾದ್‌ನ ಜುಬಿಲಿ ಹಿಲ್ಸ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನವೀನ್ ಯಾದವ್ ಪರವಾಗಿ ಅಖಿಲ ಭಾರತ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಭರ್ಜರಿ ಪ್ರಚಾರ ನಡೆಸಿದರು. ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ಅವರು, ಸಿಎಂ ರೇವಂತ್ ರೆಡ್ಡಿ ಸರ್ಕಾರ ನೀಡಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ಜನರು ಮೆಚ್ಚಿಕೊಂಡಿದ್ದಾರೆ ಎಂದು ಹೇಳಿದರು. ಬಿಜೆಪಿಯು ವೋಟ್ ಚೋರಿ ಮೂಲಕ ಅಧಿಕಾರಕ್ಕೆ ಬಂದಿದ್ದು, ಈ ಬಾರಿ ಜನರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು. ಬಿಆರ್‌ಎಸ್ ಶಾಸಕರು ಅಭಿವೃದ್ಧಿಗೆ ಗಮನಹರಿಸಿಲ್ಲ ಎಂದು ಟೀಕಿಸಿದ ಅವರು, ಜುಬಿಲಿ ಹಿಲ್ಸ್ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ನವೀನ್ ಯಾದವ್ ಗೆಲುವು ಅಗತ್ಯವಿದೆ ಎಂದರು. ಮತಯಾಚನೆ ವೇಳೆ ರಾಜ್ಯದ ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
