ವರದಿಗಾರರು :
ಮುತ್ತುರಾಜ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
31-10-2025
ನ.2ರಂದು ಕೆ-ಸೆಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ
ತುಮಕೂರು ನಗರದಲ್ಲಿ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 2 ರಂದು ಕೆ-ಸೆಟ್ ಪರೀಕ್ಷೆ ನಡೆಯುತ್ತದೆ, ಪರೀಕ್ಷೆಯು ಯಾವುದಾದರೂ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ ಕಲ್ಯಾಣಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ನವೆಂಬರ್ 2 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸಿದ್ದಾರೆ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಬಂಧಿಸಿ ಅವರ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆಪ್, ಇತರ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಲು ಅವಕಾಶ ಇರುವ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಕ್ಯಾಮರಾ ಇಲ್ಲದೆ ಇರುವರು ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದೆ. ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ/ವಿದ್ಯಾರ್ಥಿಗಳು ಮೊಬೈಲ್ ತರುವುದು/ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ತುಮಕೂರು ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ಅವರ ವಿರುದ್ಧ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
