ಲೈವ್ ಟಿವಿ ನ್ಯೂಸ್

ದಿನಾಂಕ : 18-09-2025

ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಅಭಿನಂದನಾ ಸಮಾರಂಭ

ವರದಿಗಾರರು : ಎಮ್. ಬಿ. ಮನಗೂಳಿ
ವರದಿ ಸ್ಥಳ :ವಿಜಯಪುರ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 3+

ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ, ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಅಭಿನಂದನಾ ಸಮಾರಂಭವೂ ಶ್ರೀ ರಾ. ಆ. ದಳವಾಯಿ ಪ್ರೌಢಶಾಲೆ ಸಭಾ ಭವನದಲ್ಲಿ ನಡೆಯಿತು..

ಸನ್ಮಾನ್ಯ ಜವಳಿ ಮತ್ತು ಸಕ್ಕರೆ ಸಚಿವರಾದ ಶ್ರೀ ಶಿವಾನಂದ ಎಸ್ ಪಾಟೀಲ್ ಉದ್ಘಾಟಸಿ ಮಾತನಾಡಿದರು. ಶಿಕ್ಷಕ ವೃತ್ತಿ ಪವಿತ್ರವಾದುದು. ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಇಂದಿನ ಮಕ್ಕಳನ್ನು ಭವಿಷ್ಯದ ಪ್ರಜೆಗಳನ್ನಾಗಿ ರೂಪಿಸುವುದು ನಿಮ್ಮ ಕರ್ತವ್ಯವಾಗಿದೆ. ಸರಕಾರವು ಈ ದೆಸೆಯಲ್ಲಿ ಸಾಕಷ್ಟು ಕೆಲಸ ಮಾಡುತ್ತದೆ. ಶಿಸ್ತು ಸಂಸ್ಕೃತಿಯನ್ನು ಮಕ್ಕಳಲ್ಲಿ ಬೆಳೆಸಬೇಕೆಂದರು. ಶಿಕ್ಷಕ ವೃತ್ತಿಯಿಂದ ರಾಷ್ಟ್ರಪತಿಯವರಿಗೆ ಕಾರ್ಯನಿರ್ವಹಿಸಿದ ಶ್ರೀ ಎಸ್ ರಾಧಾಕೃಷ್ಣನ್ ಅವರು ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲು ಹೇಳಿದರು.ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಶಿಕ್ಷಕರು ಗುರುಭವನ ಕಟ್ಟಿಸಲು ಮನವಿ ಸಲ್ಲಿಸಿದರು. ಸಭೆಯಲ್ಲಿ ಆದರ್ಶ ಶಿಕ್ಷಕರನ್ನು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಶ್ರೀ ಮ.ನೀ. ಪ್ರ್. ಸಿದ್ದಲಿಂಗ ಮಹಾಸ್ವಾಮಿಗಳು ವಿರಕ್ತಮಠ ಬಸವನ ಬಾಗೇವಾಡಿ ಶ್ರೀ ಷ.ಬ್ರ್. ಶಿವ ಪ್ರಕಾಶ ಮಹಾಸ್ವಾಮಿಗಳು ಶ್ರೀ ವೇದಮೂರ್ತಿ ಹುಚ್ಚಯ್ಯ ಸ್ವಾಮಿ ದೇವಾಂಗಮಠ ಗೋಳಸಂಗಿ ಇವರು ದಿವ್ಯ ಸಾನಿಧ್ಯವಹಿಸಿದ್ದರು ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ನೌಕರರ ಸಂಘದ ಅಧ್ಯಕ್ಷರು ಬಸವನ ಬಾಗೇವಾಡಿ ತಾಲೂಕಿನ ಎಲ್ಲ ಶಿಕ್ಷಕ ವೃಂದಭಾಗವಹಿಸಿದ್ದರು .

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand