ವರದಿಗಾರರು :
ದರ್ಶನ್ ಎಂ.ಎನ್ ||
ಸ್ಥಳ :
ದಾವಣಗೆರೆ
ವರದಿ ದಿನಾಂಕ :
17-11-2025
“ಸಿದ್ದರಾಮಯ್ಯರೇ 5 ವರ್ಷ ಸಿಎಂ: ಸತೀಶ್ ಜಾರಕಿಹೊಳಿ ಸ್ಪಷ್ಟನೆ”
ದಾವಣಗೆರೆ: ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷಗಳವರೆಗೆ ಮುಖ್ಯಮಂತ್ರಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಭೇಟಿನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆಯೇ ನಡೆದಿಲ್ಲ. ಸಿದ್ದರಾಮಯ್ಯ ಗಟ್ಟಿಯಾಗಿ ಆಡಳಿತ ನಡೆಸುತ್ತಿದ್ದಾರೆ” ಎಂದು ಹೇಳಿದರು.
ದಾವಣಗೆರೆ: “ಮುಂದಿನ 5 ವರ್ಷವೂ ಸಿದ್ದರಾಮಯ್ಯರೇ ಮುಖ್ಯಮಂತ್ರಿ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದಾವಣಗೆರೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಸುದ್ದಿಗಳು ವೇಗ ಪಡೆದುಕೊಂಡಿರುವ ಸಂದರ್ಭದಲ್ಲಿ, ಅವರ ಈ ಹೇಳಿಕೆ ಗಮನಸೆಳೆಯುವಂತಾಗಿದೆ.
ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಶನಿವಾರ ಭೇಟಿ ನೀಡಿದ ಸಚಿವ ಜಾರಕಿಹೊಳಿ ಮಾಧ್ಯಮದವರೊಂದಿಗೆ ಮಾತನಾಡಿದರು. “ಕರ್ನಾಟಕದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯ ಅವರು ಗಟ್ಟಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆ ಕುರಿತು ಸರ್ಕಾರ ಅಥವಾ ಪಕ್ಷದೊಳಗೆ ಯಾವುದೇ ಚರ್ಚೆ ನಡೆದಿಲ್ಲ” ಎಂದು ಅವರು ಹೇಳಿದರು.
ಅದೇ ರೀತಿ ಸಚಿವ ಸಂಪುಟ ಪುನರ್ರಚನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಈ ವಿಷಯ ಹೈಕಮಾಂಡ್ ಎಸ್‌ಡಿಸಿ. ನಾವು ನಿರ್ಧಾರ ಕೈಗೆತ್ತಿಕೊಳ್ಳುವವರಲ್ಲ. ನಾನು ಸಿಎಂ ಅಲ್ಲ, ಕೆಪಿಸಿಸಿ ಅಧ್ಯಕ್ಷರೂ ಅಲ್ಲ. ಈ ವಿಷಯದಲ್ಲಿ ಸಿದ್ದರಾಮಯ್ಯ ಅವರು ಈಗಾಗಲೇ ತಮ್ಮ ಮಾತನ್ನ ಹೇಳಿದ್ದಾರೆ” ಎಂದು ಸ್ಪಷ್ಟನೆ ನೀಡಿದರು.
ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತು ಹರಿದಾಡುತ್ತಿದ್ದ ಊಹಾಪೋಹಗಳಿಗೆ ಸಚಿವ ಸತೀಶ್ ಜಾರಕಿಹೊಳಿ ನೀಡಿದ ಈ ಹೇಳಿಕೆ ಸ್ಪಷ್ಟ ಉತ್ತರವಾಗಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
