ವರದಿಗಾರರು :
ನಾಗೇಶ್ ಕೆ ಜೆ ||
ಸ್ಥಳ :
ಹಾಸನ
ವರದಿ ದಿನಾಂಕ :
04-11-2025
ಹಾಸನ: ಮಹಿಳಾ ಆಯೋಗದ ಅಧ್ಯಕ್ಷ ಡಾ. ನಾಗಲಕ್ಷ್ಮಿ ಚೌದ್ರಿ ಹಾಸನ ಜಿಲ್ಲೆ ಪ್ರವಾಸ
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ. ನಾಗಲಕ್ಷ್ಮಿ ಚೌದ್ರಿ ಹಾಸನ ಜಿಲ್ಲೆಯ ಮೂರು ದಿನಗಳ ಪ್ರವಾಸವನ್ನು ನಡೆಸುತ್ತಿದ್ದಾರೆ. ಈ ಪ್ರವಾಸದ ಸಂದರ್ಭದಲ್ಲಿ ಅವರು ಜಿಲ್ಲಾ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳು, ಸರ್ಕಾರಿ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ, ಮಹಿಳೆಯರ ಕಷ್ಟ ಮತ್ತು ಸಮಸ್ಯೆಗಳನ್ನು ನೇರವಾಗಿ ಕೇಳಿ, ಮನವಿಗಳನ್ನು ಸ್ವೀಕರಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ವಿಶೇಷವಾಗಿ ಗಮನ ಸೆಳೆದದ್ದು, ಡಾ. ನಾಗಲಕ್ಷ್ಮಿ ಚೌದ್ರಿಯ ಕಾರನ್ನು ಮಹಿಳಾ ಚಾಲಕಿ ಚಾಲನೆಯಲ್ಲಿರುತ್ತಾರೆ, ಇದು ಸಾರ್ವಜನಿಕರಲ್ಲಿ ಶ್ಲಾಘನೀಯ ಪ್ರತಿಕ್ರಿಯೆ ಮೂಡಿಸಿದೆ. ಅವರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದು ಗಮನಾರ್ಹವಾಗಿದೆ.
ನಾಳೆ ಅವರು ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಿದ್ದಾರೆ. ಪ್ರವಾಸದ ವೇಳೆ ಮಹಿಳೆಯರ ಕಲ್ಯಾಣ ಮತ್ತು ಅವರ ಕಷ್ಟಗಳ ಪರಿಹಾರ ಕುರಿತು ಚರ್ಚೆ ನಡೆಯಲಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
