ಲೈವ್ ಟಿವಿ ನ್ಯೂಸ್

ದಿನಾಂಕ : 02-04-2025

ಡಿವೋರ್ಸ್ ವದಂತಿಯ ನಡುವೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ಐಶ್ವರ್ಯಾ ರೈ ದಂಪತಿ !

ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್
ವರದಿ ಸ್ಥಳ :ಬೆಂಗಳೂರು
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 13547+

ಬಾಲಿವುಡ್ ಬೆಡಗಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ದಂಪತಿಯ ಡಿವೋರ್ಸ್ ವಿಚಾರ ಆಗಾಗ ಚರ್ಚೆಗೆ ಗ್ರಾಸವಾಗುತ್ತಲೇ ಇರುತ್ತದೆ. ಹೀಗರುವಾಗ ಡಿವೋರ್ಸ್ ಸುದ್ದಿ ಬಂದೇ ಇಲ್ಲ ಎಂಬಷ್ಟು ಹ್ಯಾಪಿಯಾಗಿ ಪತಿ ಅಭಿಷೇಕ್‌ ಜೊತೆ ಐಶ್ವರ್ಯಾ ಹೆಜ್ಜೆ ಹಾಕಿದ್ದಾರೆ.

ಇತ್ತೀಚೆಗೆ ಪತ್ನಿ ಐಶ್ವರ್ಯಾ ಮತ್ತು ಪುತ್ರಿ ಆರಾಧ್ಯ ಜೊತೆ ಅಭಿಷೇಕ್ ಬಚ್ಚನ್ ಅವರು ಸಂಬಂಧಿಕರ ಮದುವೆಗೆ ಹಾಜರಿ ಹಾಕಿದ್ದರು. ಈ ವೇಳೆ, ಐಶ್ವರ್ಯಾ ಜೋಡಿ ಕಜರಾರೇ ಹಿಂದಿ ಹಾಡಿಗೆ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಅಭಿಷೇಕ್ ಮತ್ತು ಐಶ್ವರ್ಯಾ ಕಜರಾರೆ ಹಾಡಿನ ಹುಕ್ ಸ್ಟೆಪ್ಸ್ ಹಾಕ್ತಾ ಎಂಜಾಯ್ ಮಾಡಿದ್ದಾರೆ. ಇವರೊಂದಿಗೆ ಪುತ್ರಿ ಆರಾಧ್ಯ ಕೂಡ ಡ್ಯಾನ್ಸ್ ಮಾಡಿದ್ದಾರೆ. ಈ ಮೂಲಕ ಡಿವೋರ್ಸ್ ಸುದ್ದಿ ಹಬ್ಬಿಸುವವರ ಬಾಯಿ ಮುಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಫ್ಯಾನ್ಸ್ ಫುಲ್ ಖುಷಿಪಟ್ಟಿದ್ದಾರೆ.

ಅಂದಹಾಗೆ, ಅಭಿಷೇಕ್ ಮತ್ತು ಐಶ್ವರ್ಯಾ ರೈ ಅವರು 2007ರಲ್ಲಿ ಮದುವೆಯಾದರು. ಮುದ್ದಾದ ಮಗಳು ಆರಾಧ್ಯ ಜೊತೆ ಈ ಜೋಡಿ ಖುಷಿಯಿಂದ ಜೀವನ ನಡೆಸುತ್ತಿದ್ದಾರೆ.

ಹೊಸ ಪಾತ್ರಗಳ ಮೂಲಕ ಅಭಿಷೇಕ್ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಐಶ್ವರ್ಯಾ ರೈ ಅವರು ಮದುವೆ ಬಳಿಕ ಕಮ್ಮಿ ಸಿನಿಮಾ ಮಾಡಿದ್ರೂ ಕೂಡ ವಿಭಿನ್ನ ಎಂದೆನಿಸುವ ಪಾತ್ರಗಳ ಮೂಲಕ ಬರುತ್ತಿದ್ದಾರೆ. ಅದಕ್ಕೆ ‘ಪೊನ್ನಿಯನ್ ಸೆಲ್ವನ್ 1’ ಮತ್ತು ‘ಪೊನ್ನಿಯನ್‌ ಸೆಲ್ವನ್ 2’ ಸಿನಿಮಾಗಳೇ ಸಾಕ್ಷಿ.‌

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand