ವರದಿಗಾರರು :
ಗುರುಬಸವರಾಜ ||
ಸ್ಥಳ :
ಹರಪನಹಳ್ಳಿ
ವರದಿ ದಿನಾಂಕ :
10-11-2025
ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭೇಟಿ – ಮಲ್ಲಿಕಾರ್ಜುನ್ ಆತಿಥ್ಯ
ಹರಪನಹಳ್ಳಿ, ನ.10: ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಇಂದು ಹರಪನಹಳ್ಳಿ ಪಟ್ಟಣಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಹೆಲಿಪ್ಯಾಡ್‌ನಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.
ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ ಅವರ ಪುತ್ರನ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಧು–ವರರಿಗೆ ಆಶೀರ್ವಾದ ಕೋರಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಸತೀಶ್ ಜಾರಕಿಹೊಳಿ, ಶಾಸಕಿ ಲತಾ ಮಲ್ಲಿಕಾರ್ಜುನ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು, ಶಾಸಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
ಸಚಿವ ಮಲ್ಲಿಕಾರ್ಜುನ್ ಅವರು ನಾಯಕರಿಗೆ ಸ್ವಾಗತ ಕೋರಿ, ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿ ಕುರಿತಾಗಿ ಚರ್ಚೆ ನಡೆಸಿದರು. ಕಾರ್ಯಕ್ರಮದ ಬಳಿಕ ಮುಖಂಡರು ಪರಸ್ಪರ ಅಭಿನಂದನೆ ವಿನಿಮಯ ಮಾಡಿಕೊಂಡರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
